ETV Bharat / state

ಮೈಸೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.. ಆರೋಪಿಗಳ ಬಂಧನಕ್ಕೆ ಸಿಎಂ ಸೂಚನೆ - CM order arrest of Mysore girl gang rape accused

ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಮೇಲೆ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿರುವುದಾಗಿ ಸಿಎಂ ಹೇಳಿದ್ದಾರೆ.

cm-bommai-order-to arrest-mysore-girl-gang-rape- case accused
ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಸಿಎಂ ಸೂಚನೆ
author img

By

Published : Aug 25, 2021, 6:10 PM IST

ನವದೆಹಲಿ/ಬೆಂಗಳೂರು: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಆಧರಿಸಿ ದೂರು ದಾಖಲಾಗಿದೆ. ಆ ದೂರಿನ ಆಧಾರದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದರು.

ಇಂದು ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿಯಾಗುತ್ತೇನೆ ನಂತರ ಜಲಸಂಪನ್ಮೂಲ ಸಚಿವರ ಭೇಟಿ ಮಾಡಿ ಮೇಕೆದಾಟು, ಮುಂತಾದ ವಿಚಾರ ಕುರಿತು ಚರ್ಚೆ ಚರ್ಚೆ ನಡೆಸುತ್ತೇನೆ. ನಾಳೆ ಹಣಕಾಸು, ಆರೋಗ್ಯ ಹಾಗು ಭೂ ಸಾರಿಗೆ ಸಚಿವರ ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು. ವ್ಯಾಕ್ಸಿನ್ ಪೂರೈಕೆ ಸಂಬಂಧ ಆರೋಗ್ಯ ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು: ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ Gangrape

ETV Bharat Logo

Copyright © 2024 Ushodaya Enterprises Pvt. Ltd., All Rights Reserved.