ETV Bharat / state

ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸಲ್ಲದು ಎಂದ ಸಿಎಂ ಬೊಮ್ಮಾಯಿ

ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

cm-bommai-reaction-saffron-colour-to-school-classrooms
ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸಲ್ಲದು ಎಂದ ಸಿಎಂ ಬೊಮ್ಮಾಯಿ
author img

By

Published : Nov 14, 2022, 10:55 AM IST

ಬೆಂಗಳೂರು: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನದ ಅವರ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಅವರು ಮಾತನಾಡಿದರು.

ಈ ವೇಳೆ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ, ಅದನ್ನು ಕಲಿಯಲಿ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.