ETV Bharat / state

ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ - ಕೆಆರ್ ಪೇಟೆಯ ತ್ರಿವೇಣಿ ಸಂಗಮ

ಅಕ್ಟೋಬರ್ 13, 14, 15, 16ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ -ಹೇಮಾವತಿ -ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ.

CM Bommai released the Mahakumbah Mela logo
ಮಹಾಕುಂಭಮೇಳ ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
author img

By

Published : Oct 7, 2022, 10:04 PM IST

ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಬಿಡುಗಡೆಗೊಳಿಸಿದರು.

ರೇಸ್ ಕೋರ್ಸ್​ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಮಹಾಕುಂಭ ಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು. ಅಕ್ಟೋಬರ್ 13, 14, 15, 16ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ -ಹೇಮಾವತಿ -ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ನಡೆಯಲಿದೆ. ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲೋಗೋ ಸಿದ್ದಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಮಹಾಕುಂಭಮೇಳದ ಸಿದ್ಧತೆ ಕುರಿತು ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದರು. ಇದೊಂದು ರಾಜ್ಯದ ಮಹತ್ವದ ಕಾರ್ಯಕ್ರಮವಾಗಿದೆ. ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆ ಹಾಗೂ ವಿಶೇಷ ಕಾಳಜಿ ವಹಿಸಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.