ETV Bharat / state

ಸಿಎಂ ನಡೆ ಹಿಂಸೆ ಪ್ರಚೋದಿಸುವಂತಿದೆ, ಕೊಲೆಯಾದ ಇಬ್ಬರ ಮನೆಗಳಿಗೂ ಬೊಮ್ಮಾಯಿ ಭೇಟಿ ನೀಡ್ಬೇಕಿತ್ತು: ಹೆಚ್​ಡಿಕೆ - Praveen Nettaru Murder case

ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ. ರಕ್ತದಲ್ಲಿ ಜಾತಿ - ಧರ್ಮಗಳ ಗುಂಪುಗಳಿವೆಯಾ ಎಂದು ಹೆಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

cm-bommai-should-have-visited-both-youth-homes-who-killed-in-mangaluru-says-hd-kumaraswamy
ಸಿಎಂ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ, ಕೊಲೆಯಾದ ಇಬ್ಬರ ಮನೆಗಳಿಗೂ ಬೊಮ್ಮಾಯಿ ಭೇಟಿ ನೀಡಬೇಕಿತ್ತು: ಹೆಚ್​ಡಿಕೆ
author img

By

Published : Jul 29, 2022, 8:00 PM IST

ಬೆಂಗಳೂರು: ಬಸವರಾಜ ಬೊಮ್ಮಾಯಿ ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿದ್ದಾರೆ.

ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ 'ಸರ್ವೇ ಜನೋ ಸುಖಿನೋ ಭವಂತು' ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜನ್ಮ ದಿನದಂದೇ ಮಣ್ಣಾದ ಫಾಜಿಲ್... ಮಗನ ಹುಟ್ಟಹಬ್ಬ ಆಚರಿಸಬೇಕಿದ್ದ ಪೋಷಕರಿಂದ ಅಂತ್ಯಸಂಸ್ಕಾರ

ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ. ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ?. ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೇ ಗೊತ್ತಿಲ್ಲದಿದ್ದರೆ ಹೇಗೆ?. ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ʼಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ. ʼಯೋಗಿ ಅದಿತ್ಯನಾಥ್ ಮಾದರಿʼ ಎನ್ನುತ್ತಿದ್ದಾರೆ. ಉತ್ತರ ಪ್ರದೇಶದ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಯುವ ಮೋರ್ಚಾ ಕಾರ್ಯಕರ್ತರ ಕೊಡುಗೆ ಏನು?, ರಾಜೀನಾಮೆ ಕೊಡುವುದು ಹೇಡಿಗಳ ಲಕ್ಷಣ: ಈಶ್ವರಪ್ಪ ಆಕ್ರೋಶ

ಸಂವಿಧಾನದ ಮೇಲೆ ಗೌರವ ಇಲ್ಲದವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕ-ಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು, ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ 'ಹೊಸ ಮಾರಿ'ಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ ಎಂದು ಕುಮಾರಸ್ವಾಮಿ ಸಿಎಂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದಾರೆ.

ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ ಎಂದೂ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ ಎನ್​ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.