ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಆರೋಗ್ಯ ವಿಚಾರಿಸಿದರು.
ದೂರವಾಣಿ ಕರೆ ಮಾಡಿದ ಸಿಎಂ, ಹೆಚ್ಡಿಡಿ ಯೋಗಕ್ಷೇಮ ವಿಚಾರಿಸಿದರು. ಶೀಘ್ರವಾಗಿ ಗುಣಮುಖರಾಗುವಂತೆ ದೇವೇಗೌಡರಿಗೆ ಹಾರೈಸಿದರು.
ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಗೌಡರ ಆರೋಗ್ಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ