ETV Bharat / state

ಮೇಕೆದಾಟು ವಿವಾದ: ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ - ಮೇಕೆದಾಟು ವಿವಾದ

ಮೇಕೆದಾಟು ಸಮಗ್ರ ಯೋಜನಾ ವರದಿಗೆ ಅನುನೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

cm-bommai-talks-with-union-minister-gajendra-singh-shekhawat-on-mekedatu
ಮೇಕೆದಾಟು ವಿವಾದ: ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ
author img

By

Published : Jul 1, 2022, 10:37 AM IST

ಬೆಂಗಳೂರು: ಕೇಂದ್ರ ಜಲ ಆಯೋಗದ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿರುವ ಸಮಗ್ರ ಯೋಜನಾ ವರದಿಗೆ ಅನುನೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನೀಡಿದರು.

ಕೇಂದ್ರ ಸಚಿವರನ್ನು ರಾಜ್ಯದ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿ ಗೌರವ ಸಲ್ಲಿಸಿದರು. ನಂತರ ಕೆಲಕಾಲ ರಾಜಕೀಯ ಹಾಗೂ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು. ಕಾವೇರಿ ನದಿಗೆ ಮೇಕೆದಾಟು ಸ್ಥಳದಲ್ಲಿ ಸಮತೋಲನ ಜಲಾಶಯ ಕಟ್ಟುವ ಯೋಜನೆ ಬಗ್ಗೆ ಸಮಗ್ರವಾದ ವಿವರಣೆ ನೀಡಿ, ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸುವುದಲ್ಲದೇ ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ನೀರು ಒದಗಿಸುವ ಕುರಿತಂತೆ ಸಮಗ್ರ ಯೋಜನಾ ವರದಿಯಲ್ಲಿ ವಿವರಿಸಿದರು.

ರಾಜ್ಯದ ಪಾಲಿನ ನೀರಿನಲ್ಲೇ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ಅವರ ಪಾಲಿನ ನೀರನ್ನು ಅವರಿಗೆ ಬಿಟ್ಟ ನಂತರವಷ್ಟೇ ನಾವು ಇಲ್ಲಿ ನೀರು ಸಂಗ್ರಹ ಮಾಡುತ್ತೇವೆ. ಹಾಗಾಗಿ ತಮಿಳುನಾಡು ಆಕ್ಷೇಪ ಪರಿಗಣಿಸದೇ ರಾಜ್ಯದ ಯೋಜನೆಗೆ ಸಮ್ಮತಿ ನೀಡಬೇಕು ಎಂದು ಸಿಎಂ ಮನವಿ ಮಾಡಿದರು.

ಜುಲೈ 6 ಮತ್ತು 7ರಂದು ನಡೆಯಲಿರುವ ಕೇಂದ್ರ ಜಲ ಆಯೋಗದ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿರುವ ಸಮಗ್ರ ಯೋಜನಾ ವರದಿ ಪರಿಶೀಲಿಸಲು ನಿರ್ಧರಿಸಲಾಗಿದೆ. ಹಾಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ತಗ್ಗಿದ ಮಳೆ: ಸಹಜ ಸ್ಥಿತಿಯತ್ತ ಜನಜೀವನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.