ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿರುವ ಅವರು, 11.45ಕ್ಕೆ ಲಕ್ನೋ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವರು.
ಸಂಜೆ 4 ಗಂಟೆಗೆ ಉತ್ತರ ಪ್ರದೇಶ ಸಿಎಂ ಆಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭಕ್ಕೆ ಆಗಮಿಸುವಂತೆ ಯೋಗಿ ಆದಿತ್ಯನಾಥ್ ಖುದ್ದು ದೂರವಾಣಿ ಕರೆ ಮಾಡಿ ಬೊಮ್ಮಾಯಿಗೆ ಆಹ್ವಾನ ನೀಡಿದ್ದಾರೆ. ಪ್ರಮಾಣವಚನ ಸಮಾರಂಭ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ವಿಶೇಷ ವಿಮಾನದ ಮೂಲಕ ರಾತ್ರಿ 10.30ಕ್ಕೆ ಸಿಎಂ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.