ETV Bharat / state

ಸೋಮವಾರ ದೆಹಲಿಗೆ ಸಿಎಂ ಪ್ರವಾಸ; ಸಚಿವಾಕಾಂಕ್ಷಿಗಳ ಚಿತ್ತ ವರಿಷ್ಠರತ್ತ.. - ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಆಗುವ ನಿರೀಕ್ಷೆ

ರಾಜ್ಯದಲ್ಲಿ ಮತ್ತೆ ಸಂಪುಟ ಸರ್ಕಸ್ ಪ್ರಹಸನ ಆರಂಭಗೊಂಡಿದೆ. ಬೊಮ್ಮಾಯಿ ಸಂಪುಟದಲ್ಲಿ ಖಾಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ಜೊತೆಗೆ ಕೆಲ ಹಿರಿಯರನ್ನು, ಕಳಪೆ ಸಾಧನೆ ಮಾಡಿರುವ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡುವ ಚಿಂತನೆ ನಡೆದಿದೆ.

ಸೋಮವಾರ ದೆಹಲಿಗೆ ಸಿಎಂ ಪ್ರವಾಸ
ಸೋಮವಾರ ದೆಹಲಿಗೆ ಸಿಎಂ ಪ್ರವಾಸ
author img

By

Published : Feb 3, 2022, 5:15 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ನವದೆಹಲಿ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಮತ್ತೆ ಕೇಸರಿ ಪಾಳಯದಲ್ಲಿ ಸಂಚಲನ ಆರಂಭವಾಗಿದೆ. ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದರೆ, ಕೆಲ ಸಚಿವರಲ್ಲಿ ಆತಂಕ ಮನೆ ಮಾಡಿದೆ. ನಿಗಮ ಮಂಡಳಿಗಳ ಆಕಾಂಕ್ಷಿಗಳೂ ಅವಕಾಶದ ನಿರೀಕ್ಷೆಯಲ್ಲಿ ಗರಿ ಗರಿ ಧಿರಿಸು ಸಿದ್ಧ ಮಾಡಿಕೊಂಡಿದ್ದಾರೆ. ಇದೆಲ್ಲದರ ನಡುವೆ ಸಿಎಂ ಸೈಲೆಂಟಾಗಿ ಹೈಕಮಾಂಡ್ ಭೇಟಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಸಂಪುಟ ಸರ್ಕಸ್ ಪ್ರಹಸನ: ರಾಜ್ಯದಲ್ಲಿ ಮತ್ತೆ ಸಂಪುಟ ಸರ್ಕಸ್ ಪ್ರಹಸನ ಶುರುವಾಗಿದೆ. ಬೊಮ್ಮಾಯಿ ಸಂಪುಟದಲ್ಲಿ ಖಾಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ಜೊತೆಗೆ ಕೆಲ ಹಿರಿಯರನ್ನು, ಕಳಪೆ ಸಾಧನೆ ಮಾಡಿರುವ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡುವ ಚಿಂತನೆ ನಡೆದಿದೆ. ಹೀಗಾಗಿ ಮುಖ್ಯಮಂತ್ರಿಗಳ ಸೋಮವಾರದ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂಪುಟ ಸೇರುವ ಪ್ರಬಲ ಆಕಾಂಕ್ಷಿಯಾಗಿದ್ದು, ದೆಹಲಿ ಮಟ್ಟದಲ್ಲೇ ಲಾಬಿ ಮಾಡುತ್ತಿದ್ದಾರೆ ಎನ್ನಲಾಗ್ತಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕೂಡ ಇದೇ ಹಾದಿ ತುಳಿದಿದ್ದಾರೆ. ಉಭಯ ನಾಯಕರು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹಾವು - ಮುಂಗುಸಿಯಂತೆ ಕಚ್ಚಾಡುತ್ತಿದ್ದವರು ಇದೀಗ ಸಂಪುಟ ಸೇರಲು ಒಂದಾಗಿ ಅಚ್ಚರಿ ಮೂಡಿಸಿದ್ದಾರೆ.

ಬಹಿರಂಗ ಹೇಳಿಕೆ: ಅಸಮರ್ಥರನ್ನು ಕೈಬಿಟ್ಟು ಕೆಲಸ ಮಾಡುವವರಿಗೆ ಅವಕಾಶ ಕೊಡಿ ಎಂದು ಇಬ್ಬರು ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ. ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸುದ್ದಿಗೋಷ್ಟಿಗಳನ್ನು ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ, ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಸೇರಿದಂತೆ ಇನ್ನೂ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಲಾಬಿ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ವೇಳೆ ಸಿಎಂ ರೇಸ್ ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ್ ಕೂಡ ಸಚಿವ ಸಂಪುಟ ಸೇರುವ ಪ್ರಯತ್ನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪರ್ಸೆಂಟೇಜ್ ಲೆಕ್ಕದಲ್ಲಿ ಪಿಡಿಒಗಳನ್ನು ಲಂಚಕ್ಕಾಗಿ ಪೀಡಿಸುತ್ತಿದ್ದ ಶ್ರೀರಂಗಪಟ್ಟಣ ಇಒ ಅಮಾನತು

ಕೆಲವು ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಕೆಲ ಸಚಿವರು ಇಲಾಖೆಯ ಪ್ರಗತಿ ವರದಿಯನ್ನು ಬಿಡುಗಡೆ ಮಾಡಿ ತಮ್ಮ ಸಾಧನೆಯನ್ನು ಹೇಳಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವರಾದ ಪ್ರಭು ಚವ್ಹಾಣ್, ಶಶಿಕಲಾ ಜೊಲ್ಲೆ ಸೇರಿ ಕೆಲವರು ಇಲಾಖೆಯ ಸಾಧನಾ ವರದಿ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ. ಕೆಲ ಸಚಿವರು ಸಂಪುಟದಿಂದ ಕೈಬಿಡದಂತೆ ಮನವಿ ಮಾಡಿ ಇಲಾಖಾ ಸಾಧನೆಯ ವಿವರಗಳನ್ನೂ ನೀಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ, ಸಂಪುಟದಲ್ಲಿ ಉಳಿಸಿಕೊಳ್ಳುವುದು ಬಿಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದಾಗಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಚಿವರಾದ ಎಸ್.ಟಿ ಸೋಮಶೇಖರ್ ಸೇರಿದಂತೆ ಕಾಂಗ್ರೆಸ್,ಜೆಡಿಎಸ್ ತೊರೆದು ಬಿಜೆಪಿ ಸೇರಿ ಸಚಿವರಾದವರು. ಇಂತಹ ಹೇಳಿಕೆ ನೀಡಿ ತಮ್ಮ ಸ್ಥಾನ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

ಜಾರಕಿಹೊಳಿ ಗೇಮ್ ಪ್ಲಾನ್: ಈ ಎಲ್ಲಾ ಬೆಳವಣಿಗೆಗಳ ನಡುವೆ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರಲು ಪ್ರಯತ್ನಿಸುತ್ತಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತಮ್ಮ ವಿರುದ್ಧದ ಪ್ರಕರಣವನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಅದರ ಜೊತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಇದು ಸಾಲದು ಎನ್ನುವಂತೆ ಇದೀಗ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿನ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಅನುಸುತ್ತಿದ್ದಾರೆ.

ನಿಗಮ ಮಂಡಳಿಗಳ ಅಧ್ಯಕ್ಷರಾಗಿರುವ ಮಾಡಾಳು ವಿರೂಪಾಕ್ಷಪ್ಪ, ರಾಜುಗೌಡ ಸೇರಿದಂತೆ ಕೆಲವರು ನಿಗಮ ಮಂಡಳಿ ಬದಲು ಸಂಪುಟಕ್ಕೆ ಬರಲು ಯತ್ನಿಸುತ್ತಿದ್ದಾರೆ.

ಚುನಾವಣಾ ಸಂಪುಟಕ್ಕೆ ವರಿಷ್ಠರ ಸಮ್ಮತಿ: ಈ ಬಾರಿಯ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ಪುನಾರಚನೆ, ವಿಸ್ತರಣೆ ಕುರಿತು ಮಾತುಕತೆಗೆ ವರಿಷ್ಠರು ಅವಕಾಶ ಕಲ್ಪಿಸಿದಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವುದಂತೂ ಖಚಿತವಾಗಿದೆ. ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸುವ ಭವಿಷ್ಯದ ಚುನಾವಣೆ ದೃಷ್ಟಿಯಿಂದ ಚುನಾವಣಾ ಕ್ಯಾಬಿನೆಟ್ ರಚನೆಗೆ ಅನುಮತಿ ನೀಡಲಿದೆ. ಶೇ.40-50ರಷ್ಟು ಹೊಸಬರಿಗೆ ಅವಕಾಶ ಎನ್ನಲಾಗುತ್ತಿದೆ. ಆದರೆ, ಸದ್ಯ ವರಿಷ್ಠರು ಪಂಚ ರಾಜ್ಯಗಳ ಚುನಾವಣಾ ಕಾರ್ಯದಲ್ಲಿ ತೊಡಗಿದ್ದು, ಆ ಚುನಾವಣೆ ಬಳಿಕವೇ ಸಂಪುಟ ವಿಸ್ತರಣೆ, ಪುನಾರಚನೆಯಂತಹ ಪ್ರಯತ್ನಕ್ಕೆ ಕೈಹಾಕುವ ಸಾಧ್ಯತೆ ಹೆಚ್ಚಿದೆ ಎನ್ನಲಾಗ್ತಿದೆ. ಅಲ್ಲದೆ ಇದೀಗ ವಿಧಾನಸಭೆ ಜಂಟಿ ಅಧಿವೇಶನ ಆರಂಭಗೊಳ್ಳುತ್ತಿದ್ದು, ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಸಚಿವರ ಬದಲಾವಣೆಯಾದಲ್ಲಿ ಸದನದಲ್ಲಿ ಕಷ್ಟವಾಗಲಿದೆ ಎನ್ನುವ ಕಾರಣಕ್ಕೆ ಬಜೆಟ್ ನಂತರವೇ ಸಂಪುಟ ಸರ್ಜರಿಗೆ ವರಿಷ್ಠರು ಸೂಚಿಸಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.

ಗರಿ ಗರಿ ಧರಿಸುಸ ಹೊಲಿಸಿ ಸಿದ್ಧರಾದ ನಿಗಮ ಮಂಡಳಿ ಆಕಾಂಕ್ಷಿಗಳು: ಖಾಲಿ ಇರುವ ನಿಗಮ ಮಂಡಳಿಗಳಿಗೆ ನೇಮಕ ಹಾಗು ಎರಡು ವರ್ಷ ಪೂರ್ಣಗೊಳಿಸಿರುವ ಅಧ್ಯಕ್ಷರನ್ನು ಬದಲಿಸಿ ಹೊಸಬರಿಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಬಿಜೆಪಿ ಮಟ್ಟದಲ್ಲಿ ಚರ್ಚೆ ನಡೆದಿದ್ದು, ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡುವ ಕುರಿತು ಪಟ್ಟಿ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿದೆ. ಈ ಪಟ್ಟಿಯೊಂದಿಗೆ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ ಅವರು, ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಸೋಮವಾರದ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ಚರ್ಚೆ ವೇಳೆ ನಿಗಮ ಮಂಡಳಿ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ. ಆಕಾಂಕ್ಷಿಗಳು ಈಗಾಗಲೇ ಗರಿ ಗರಿ ಧಿರಿಸು ಹೊಲಿಸಿಕೊಂಡು ಅವಕಾಶ ಸಿಗುವ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದಾರೆ. ಕೆಲವರಂತೂ ಪಕ್ಷದ ಕಚೇರಿಗೆ ಎಡತಾಡುತ್ತಲೇ ಇದ್ದಾರೆ. ಮುಖ್ಯಮಂತ್ರಿಗಳ ಮನೆ ಬಾಗಿಲನ್ನೂ ತಟ್ಟುತ್ತಿದ್ದಾರೆ. ಒಟ್ಟಿನಲ್ಲಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ. ಸಂಪುಟ ಪುನಾರಚನೆಯೋ, ನಿಗಮ ಮಂಡಳಿ ನೇಮಕಾತಿಯೋ ಅಥವಾ ರಾಜ್ಯದ ವಿಚಾರಗಳ ಕುರಿತು ಚರ್ಚೆಗಷ್ಟೇ ಈ ಭೇಟಿ ಸೀಮಿತವಾಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.