ETV Bharat / state

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ GST ಪರಿಶೀಲನಾ ಸಮಿತಿ ಸಭೆ: ಎಲ್ಲ ರಾಜ್ಯಗಳ ಹಣಕಾಸು ಸಚಿವರು ಭಾಗಿ - ತೆರಿಗೆ ಬಾಕಿ

ಜಿಎಸ್‌ಟಿ (GST) ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ, ಜಿಎಸ್‌ಟಿಯಿಂದ ವಿನಾಯಿತಿ ಪಡೆದಿರುವ ಉತ್ಪನ್ನಗಳ ಬಗ್ಗೆ ಪರಿಶೀಲಿಸಲು ಹಾಗೂ ತೆರಿಗೆ ವಂಚನೆ ಮೂಲಗಳನ್ನು ಗುರುತಿಸಲು ಕೇಂದ್ರ ಹಣಕಾಸು ಸಚಿವಾಲಯ ಎರಡು ಸಮಿತಿ ರಚಿಸಿದೆ. ಈ ಹಿನ್ನೆಲೆ ತೆರಿಗೆ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಯಲಿದೆ.

CM Bommai
ಸಿಎಂ ಬೊಮ್ಮಾಯಿ
author img

By

Published : Nov 12, 2021, 9:28 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavararaja Bommai) ಅಧ್ಯಕ್ಷತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (Goods and Service Tax) (ಜಿಎಸ್‌ಟಿ) ವ್ಯವಸ್ಥೆಯ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ ಪರಿಶೀಲನಾ ಸಮಿತಿ ಸಭೆ ನಡೆಯಲಿದ್ದು, ಕೇಂದ್ರಕ್ಕೆ ವರದಿ ಸಲ್ಲಿಸುವ ಸಂಬಂಧ ಪೂರ್ವಭಾವಿ ಸಮಾಲೋಚನೆ ನಡೆಯಲಿದೆ.

ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ಸಭೆ ನಡೆಸಲಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ, ಜಿಎಸ್‌ಟಿಯಿಂದ ವಿನಾಯಿತಿ (Exemption from GST) ಪಡೆದಿರುವ ಉತ್ಪನ್ನಗಳ ಬಗ್ಗೆ ಪರಿಶೀಲಿಸಲು ಹಾಗೂ ತೆರಿಗೆ ವಂಚನೆ ಮೂಲಗಳನ್ನು ಗುರುತಿಸುವ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬೊಮ್ಮಾಯಿ, ಎಲ್ಲಾ ರಾಜ್ಯಗಳ ಹಣಕಾಸು ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಜಿಎಸ್‌ಟಿ ಅಡಿ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣ, ಜಿಎಸ್‌ಟಿಯಿಂದ ವಿನಾಯಿತಿ ಪಡೆದಿರುವ ಉತ್ಪನ್ನಗಳ ಬಗ್ಗೆ ಪರಿಶೀಲಿಸಲು ಹಾಗೂ ತೆರಿಗೆ ವಂಚನೆ ಮೂಲಗಳನ್ನು ಗುರುತಿಸಲು ಕೇಂದ್ರ ಹಣಕಾಸು ಸಚಿವಾಲಯ (Ministry of Finance) ಎರಡು ಸಮಿತಿ ರಚಿಸಿದೆ. ರಾಜ್ಯಗಳ ಹಣಕಾಸು ಸಚಿವರು ಈ ಸಮಿತಿಗಳಲ್ಲಿ ಇರಲಿದ್ದಾರೆ.

ತೆರಿಗೆ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಸಲಿರುವ ಸಮಿತಿಗೆ, ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿದ್ದು, ಸೆಪ್ಟೆಂಬರ್ ಅಂತ್ಯದಲ್ಲಿ ನೇಮಕಗೊಂಡಿರುವ ಸಮಿತಿ ಎರಡು ತಿಂಗಳಲ್ಲಿ ವರದಿ ಸಲ್ಲಿಸಬೇಕಿದೆ.

ಹಾಗಾಗಿ ಇಂದು ಸುದೀರ್ಘ ಸಭೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಎಲ್ಲಾ ರಾಜ್ಯಗಳ ಹಣಕಾಸು ಸಚಿವರ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಶೇ.12 ಹಾಗೂ ಶೇ.18ರ ತೆರಿಗೆ ಪ್ರಮಾಣವನ್ನು ಪರಸ್ಪರ ವಿಲೀನಗೊಳಿಸಬೇಕು ಎಂಬ ಬೇಡಿಕೆ ಇದೆ. ಅಲ್ಲದೇ, ವಿನಾಯಿತಿ ಪಟ್ಟಿಯಲ್ಲಿರುವ ಕೆಲವು ಉತ್ಪನ್ನ, ಸೇವೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕು ಎಂಬ ಆಗ್ರಹವೂ ಇದ್ದು, ಈ ಸಂಬಂಧವೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮುಂದಿನ 3 ದಿನ ಮಳೆ ಮುಂದುವರಿಕೆ; ಹವಾಮಾನ ಇಲಾಖೆ ಮುನ್ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.