ETV Bharat / state

ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಈ ರೀತಿ ಪೋಸ್ಟರ್​ ಹಾಕಲಾಗಿದೆ: ಸಿಎಂ

ಸೋಷಿಯಲ್ ಮೀಡಿಯಾದಲ್ಲಿ ಆಧಾರ ರಹಿತವಾಗಿ ಅಭಿಯಾನ ಮಾಡಲಾಗ್ತಿದೆ. ಇದೆಲ್ಲಾ ಸುಡೋ ಕ್ಯಾಂಪೇನ್​​ಗಳು. ನನ್ನ ಮತ್ತು ರಾಜ್ಯದ ಹೆಸರು ಕೆಡಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

CM bommayi
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Sep 21, 2022, 6:29 PM IST

ಬೆಂಗಳೂರು: ಪೇ ಸಿಎಂ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲು ಮಾಡಲು ಹೇಳಿದ್ದೇನೆ. ಇದು ವ್ಯವಸ್ಥಿತ ಷಡ್ಯಂತ್ರ. ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಈ ರೀತಿ ಮಾಡಲಾಗಿದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೇವೆಗೌಡರನ್ನು ಭೇಟಿ ಮಾಡಿ ವಾಪಸಾಗುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಸೋಷಿಯಲ್ ಮೀಡಿಯಾದಲ್ಲಿ ಆಧಾರರಹಿತವಾಗಿ ಅಭಿಯಾನ ಮಾಡಲಾಗ್ತಿದೆ. ಇದೆಲ್ಲಾ ಸುಡೋ ಕ್ಯಾಂಪೇನ್​​ಗಳು. ಇದರ ಬಗ್ಗೆ ಜನಕ್ಕೆ ಏನೂ ಗೊತ್ತಾಗಲ್ಲ ಎಂದು ಕಿಡಿಕಾರಿದರು.

ಸಿಎಂ ಬಸವರಾಜ ಬೊಮ್ಮಾಯಿ

ಈ ರೀತಿ ಮಾಡುವುದಕ್ಕೆ ಎಲ್ಲರಿಗೂ ಬರುತ್ತದೆ. ಇತ್ತೀಚೆಗೆ ಇದು ಅತೀ ಹೆಚ್ಚಾಗಿದೆ. ಇದಕ್ಕೆ ಯಾವುದೇ ಬೆಲೆ ಇಲ್ಲ. ನನಗಿಂತಲೂ ರಾಜ್ಯದ ಹೆಸರು ಕೆಡಿಸಲು ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.