ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ. ರೆಡ್ಡಿ ಪುಣ್ಯತಿಥಿ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕೆ.ಸಿ. ರೆಡ್ಡಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಿಎಂ, ಕೆ.ಸಿ. ರೆಡ್ಡಿಯವರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದವರು. ಅವರೊಬ್ಬ ಧೀಮಂತ ನಾಯಕ ಎಂದು ಬಣ್ಣಿಸಿದರು. ಮೈಸೂರು ಪ್ರಜಾಪ್ರತಿನಿಧಿ ಸಭೆಯ ಸದಸ್ಯರಾಗಿದ್ದ ಸಂದರ್ಭ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಬಹಳ ಶ್ರಮಿಸಿದ್ದರು ಎಂದು ತಿಳಿಸಿದರು.
ಬಿಸಿಲು ಇರುವ ಕಾರಣಕ್ಕೆ ಕೆ.ಸಿ. ರೆಡ್ಡಿ ಅವರ ಫೈಬರ್ ಪ್ರತಿಮೆ ಕರಗುತ್ತದೆ, ಅದನ್ನು ಬದಲಾವಣೆ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ, ನೋಡೋಣ ಹಾಗೇನಾದರೂ ಇದ್ದರೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ತಿಳಿಸಿದರು.
ಓದಿ: ಶಾಲಾ ಶುಲ್ಕ ಕಟ್ಟುವ ಬಗ್ಗೆ ಶೀಘ್ರ ಪರಿಹಾರ ಸೂತ್ರ: ಸಚಿವ ಸುರೇಶ್ ಕುಮಾರ್
ಈ ಸಂದರ್ಭದಲ್ಲಿ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.