ETV Bharat / state

ಲಾಕ್‌ಡೌನ್ ಸಡಿಲಿಕೆ, ಕಂಪನಿಗಳಿಗೆ ವಿನಾಯಿತಿ... ಏ.20 ರಂದು ಮತ್ತೊಮ್ಮೆ ಚರ್ಚಿಸಿ ನಿರ್ಧಾರ: ಸಿಎಂ - ಸಿಎಂ ಬಿಎಸ್ವೈ ಸಭೆ

ಕೋವಿಡ್ ಪ್ರಕರಣ ಕಳೆದ ಮೂರು ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾದ ಹಿನ್ನಲೆ, ಸಂಬಂಧಪಟ್ಟ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞ ವೈದ್ಯರ ಜೊತೆ ಸಮಾಲೋಚನೆ ನಡೆಸಲಾಗಿದೆ. ಇಂದು 38 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಚಿಕಿತ್ಸೆಯ ವಿಧಿ ವಿಧಾನಕ್ಕೆ ಹೆಚ್ಚು ಆಧ್ಯತೆ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಬಿಎಸ್ವೈ
ಸಿಎಂ ಬಿಎಸ್ವೈ
author img

By

Published : Apr 17, 2020, 4:58 PM IST

ಬೆಂಗಳೂರು: ಲಾಕ್​ಡೌನ್ ಸಡಿಲಿಕೆ, ಕೇಂದ್ರದ ಮಾರ್ಗಸೂಚಿಯಂತೆ ಯಾವುದಕ್ಕೆಲ್ಲಾ ಅವಕಾಶ ಕಲ್ಪಿಸಬೇಕು ಎನ್ನುವುದು ಸೇರಿದಂತೆ ಎಲ್ಲ ವಿಷಯದ ಕುರಿತು ಏಪ್ರಿಲ್ 20 ರಂದು ಮತ್ತೊಮ್ಮೆ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ಪ್ರಕರಣ ಕಳೆದ ಮೂರು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾದ ಹಿನ್ನಲೆ, ಸಂಬಂಧಪಟ್ಟ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞ ವೈದ್ಯರ ಜೊತೆ ಸಮಾಲೋಚನೆ ನಡೆಸಲಾಗಿದೆ. ಇಂದು 38 ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಚಿಕಿತ್ಸೆಯ ವಿಧಿ ವಿಧಾನಕ್ಕೆ ಹೆಚ್ಚು ಆಧ್ಯತೆ ನೀಡುವಂತೆ ಸೂಚಿಸಲಾಗಿದೆ. ರೋಗ ಲಕ್ಷಣ ಕಂಡುಬಂದ ನಾಲ್ಕೈದು ದಿನಗಳ ನಂತರ ಸೋಂಕಿತರು ಆಸ್ಪತ್ರೆಗೆ ಬರುತ್ತಿದ್ದಾರೆ. ಆದರೆ ಲಕ್ಷಣ ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಮನವಿ ಮಾಡಿದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ

ಐಸಿಯುನಲ್ಲಿರುವ ರೋಗಿಗಳಿಗಾಗಿ ವಿಶೇಷ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಪ್ಲಾಸ್ಮ ಚಿಕಿತ್ಸೆಗೆ ಅನುಮತಿ ಕೋರಿ ಮನವಿ ಮಾಡಿದ್ದು, ಐಸಿಎಂಆರ್ ಅನುಮತಿಗಾಗಿ ಕಾಯುತ್ತಿದ್ದೇವೆ. ಯಾವುದೇ ಪ್ರಕರಣ ಇರದ ಜಿಲ್ಲೆಯಲ್ಲೂ ಈ ಲಕ್ಷಣದ ತಪಾಸಣೆ ಮಾಡಲು ಸೂಚನೆ ನೀಡಲಾಗಿದೆ. 11 ಜಿಲ್ಲೆಗಳಲ್ಲಿ ಸೋಂಕಿಲ್ಲ, ಆದರೆ ತಪಾಸಣೆ ನಡೆಸಿದಾಗಲೇ ವಾಸ್ತವ ಸ್ಥಿತಿ ತಿಳಿಯಲಿದೆ. ಏಪ್ರಿಲ್ ಅಂತ್ಯದೊಳಗೆ ಹೊಸದಾಗಿ 10 ಪ್ರಯೋಗಾಲಯ ಆರಂಭಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಲಾಕ್​ಡೌನ್ ಸಡಿಲಗೊಳಿಸಿದ‌ ನಂತರ ಪ್ರಕರಣ ಹೆಚ್ಚದಂತೆ ನೋಡಿಕೊಳ್ಳಲು ತೀರ್ಮಾನಿಸಲಾಯಿತು. ಲಾಕ್​ಡೌನ್ ಸಡಿಲಿಕೆ ಸಂದರ್ಭದಲ್ಲಿ ಕಂಪನಿಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ತಜ್ಞರು ಅಭಿಪ್ರಾಯಪಟ್ಟಿದ್ದು, ಅದರಂತೆ ಲಾಕ್​ಡೌನ್ ನಂತರ ಯಾವ ರೀತಿ ಮುನ್ನಡೆಯಬೇಕು ಎನ್ನುವ ಕುರಿತು ಮಾರ್ಗಸೂಚಿ‌ ರಚಿಸಲು ತೀರ್ಮಾನಿಸಲಾಯಿತು. ಏಪ್ರಿಲ್ 20 ರಂದು ಮತ್ತೊಂದು ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೋವಿಡ್ ಪರೀಕ್ಷೆ ಮಾಡುವುದರಲ್ಲಿ ಕರ್ನಾಟಕ ಎರಡನೇ ಉತ್ತಮ ರಾಜ್ಯವಾಗಿದೆ ಎಂದು ಸಿಎಂ ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.