ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಾಣುವಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ
ವಿರಾಟ್ ಹಿಂದೂಸ್ತಾನ್ ಸಂಗಮ್ ವತಿಯಿಂದ ಡಾ.ಸುಬ್ರಮಣ್ಯನ್ ಸ್ವಾಮಿ ಅವರಿಗೆ 50 ವರ್ಷ ಸಾರ್ವಜನಿಕ ಜೀವನ ಮುಗಿಸಿದ ನೆನಪಿಗಾಗಿ ಸನ್ಮಾನಿಸಲಾಯಿತು. ಶಿಕ್ಷಕರ ಸದನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನ ನೆರವೇರಿಸಿ, ಸುಬ್ರಮಣಿಯನ್ ಸ್ವಾಮಿ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿದರು.
ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶದ ಹೊರಗಿನ ಶತ್ರುಗಳು ಮಾತ್ರ ಅಲ್ಲ, ದೇಶದ ಒಳಗೆ ಇರುವ ಶತ್ರುಗಳನ್ನು ನಾವು ಗಮನಿಸಬೇಕಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದರು.