ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮುಖಾಂತರ ಸಚಿವರು, ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ನನ್ನ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಅವರು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಇಂದಿನ ಕಾರ್ಯಕ್ರಮ ರದ್ದುಪಡಿಸಿದ ಹಿನ್ನೆಲೆಯಲ್ಲಿ ಕೊರೊನಾ ಆತಂಕಕ್ಕೆ ಸಿಲುಕಿದ್ದಾರೆ ಎನ್ನುವ ವದಂತಿಗಳು ಹರಿದಾಡಿದ ಮಾಧ್ಯಮ ಹೇಳಿಕೆ ಮೂಲಕ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ.