ಬೆಂಗಳೂರು: ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಈ ವೇಳೆ, ಸರ್ಕಾರದ ಪರವಾಗಿ ಅವರನ್ನು ರಾಜ್ಯಕ್ಕೆ ಸ್ವಾಗತಿಸಿ ಕೆಲ ಕಾಲ ಅನೌಪಚಾರಿಕ ಮಾತುಕತೆ ನಡೆಸಿದರು.
ಮಳೆಗಾಲದ ಅಧಿವೇಶನ ನಡೆಸಬೇಕಿದ್ದು, ಅದರ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಕೋವಿಡ್ ಎರಡನೇ ಅಲೆ ನಿಯಂತ್ರಣದಲ್ಲಿದೆ. ಮೂರನೇ ಅಲೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಇದನ್ನೂ ಓದಿ: ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕಾರ