ಬೆಂಗಳೂರು: 72ನೇ ಗಣರಾಜ್ಯೋತ್ಸವ ನಿಮಿತ್ತ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿನ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಲು ಆಗಮಿಸಿದ ರಾಜ್ಯಪಾಲರನ್ನು ಸ್ವಾಗತಿಸಲು ತೆರಳುವ ಮುನ್ನವೇ ಅಧಿಕೃತ ನಿವಾಸದಲ್ಲಿ ಗಣರಾಜ್ಯೋತ್ಸವ ಆಚರಿಸಿದರು.
ಓದಿ: ಕೊರೊನಾ ಅಲೆಯನ್ನು ನಿಯಂತ್ರಿಸುವಲ್ಲಿ ಕರ್ನಾಟಕ ಯಶಸ್ವಿ: ರಾಜ್ಯಪಾಲರ ಶ್ಲಾಘನೆ
ಧ್ವಜಾರೋಹಣ ನೆರವೇರಿಸಿ ಭಾರತ ಮಾತೆ, ಅಂಬೇಡ್ಕರ್ ಭಾವಚಿತ್ರಕ್ಕೆ ಸಿಎಂ ಪುಷ್ಪಾರ್ಚನೆ ಮಾಡಿದರು. ಬಳಿಕ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.