ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದ ಅಂಗವಾಗಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಾಪೂ ಒಂದ್ ಡ್ರಾಪ್ ಹಾಕ್ಲಾ.... ಎನ್ನುತ್ತಾ ಸಿಎಂ ಮಕ್ಕಳಿಗೆ ಪೋಲಿಯೋ ಹನಿ ಹಾಕಿದರು. ಲಸಿಕೆ ಹಾಕಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡು ಪೋಲಿಯೋ ನೀಡಲಾಗುತ್ತಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ ಎಂದು ಪೋಷಕರಿಗೆ ಮನವಿ ಮಾಡಿದರು.
ಪಲ್ಸ್ ಪೋಲಿಯೋ ಸಂಪೂರ್ಣ ಸುರಕ್ಷಿತವಾಗಿದೆ. ಜೀವ ರಕ್ಷಣೆಗೆ ಎರಡು ಹನಿ ಲಸಿಕೆ ಹಾಕಿಸಿ ಎಂದರು. ರಾಜ್ಯದಲ್ಲಿ 64 ಲಕ್ಷ ಮಕ್ಕಳಿಗೆ ಪೋಲಿಯೋ ನೀಡಲಾಗುತ್ತಿದೆ ಎಂದು ಇದೇ ವೇಳೆ ಸಿಎಂ ಯಡಿಯೂರಪ್ಪ ಹೇಳಿದರು.