ETV Bharat / state

ಸ್ತ್ರೀ ಶಕ್ತಿಗೆ ಒತ್ತು: ಬಜೆಟ್​ನಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ - ಯಡಿಯೂರಪ್ಪ ಬಜೆಟ್​ ಮಂಡನೆ

ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಸಭಾತ್ಯಾಗದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಬಜೆಟ್​ ಮಂಡನೆ ಭಾಷಣ ಆರಂಭಿಸಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಮಹಿಳೆಯರ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ.

Karnataka Budget 2021-22
ಕರ್ನಾಟಕ ಬಜೆಟ್ 2021
author img

By

Published : Mar 8, 2021, 12:54 PM IST

ಬೆಂಗಳೂರು: 2021-2022ನೇ ಸಾಲಿನ ಆಯವ್ಯಯ​ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರು ಈ ಬಾರಿಯ ಬಜೆಟ್​ನಲ್ಲಿ ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.

ಅಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ಮತ್ತು ಕಷ್ಟದ ಸಮಯದಲ್ಲೂ ಸಂಬಳ, ಪಿಂಚಣಿ, ಸಬ್ಸಿಡಿ ಸಕಾಲದಲ್ಲಿ ನಿರ್ವಹಿಸಲಾಗಿದೆ ಎಂದು ಹೇಳಿದರು.

ಹಾಲು ಉತ್ಪಾದನೆಯಲ್ಲಿ ರಾಜ್ಯ ಎರಡನೇ ಸ್ಥಾನ ಬಂದಿದೆ. ಕೊರೊನೋತ್ತರ ಕಾಲದಲ್ಲಿ ಭರವಸೆಯ ಆಶಾಕಿರಣ ಮೂಡಿಬಂದಿದೆ. ಕೃಷಿ, ನೀರಾವರಿ, ಮೂಲ ಸೌಕರ್ಯ ಸುಧಾರಣೆ ಜೊತೆಗೆ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಸಿಎಂ ತಮ್ಮ ಬಜೆಟ್​ ಭಾಷಣದಲ್ಲಿ ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.