ETV Bharat / state

ಬಜೆಟ್; ಸಿದ್ದರಾಮಯ್ಯ ಸರ್ಕಾರದ ‘ಅನುಗ್ರಹ ಯೋಜನೆ’ ಮುಂದುವರಿಕೆ - ಕರ್ನಾಟಕ ಆರ್ಥಿಕತೆ

ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ‘ಅನುಗ್ರಹ ಯೋಜನೆ’ ಮುಂದುವರೆಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

CM BS Yediyurappa present State Budget
ಕರ್ನಾಟಕ ಬಜೆಟ್ 2021-22
author img

By

Published : Mar 8, 2021, 3:25 PM IST

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಂದುವರೆಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಇಂದು 2021-22ನೇ ಸಾಲಿನ ಆಯವ್ಯಯ ಮಂಡಿಸಿದ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಜಾರಿಗೆ ತಂದ ‘ಅನುಗ್ರಹ ಯೋಜನೆ’ ಮುಂದುವರೆಸುವುದಾಗಿ ಘೋಷಿಸಿದ್ದಾರೆ.

ಕುರಿಗಳು ಸತ್ತರೆ 5000 ರೂ. ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ರಾಜ್ಯ ಸರ್ಕಾರ ಈ ಹಿಂದೆ ಹಿಂಪಡೆದಿತ್ತು. ರಾಜ್ಯ ಸರ್ಕಾರದ ಈ ನಿರ್ಣಯ ವಿರೋಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಕ್ಕೆ ಮಣಿದಿರುವ ಸಿಎಂ ಬಿಎಸ್‌ವೈ, ಅನುಗ್ರಹ ಯೋಜನೆಗೆ ಅನುದಾನ ಮೀಸಲಿಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ; ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣ, 16 ಡಿಪೊ ನಿರ್ಮಾಣ

ಪ್ರಕೃತಿ ವಿಕೋಪ ಹಾಗೂ ಅಪಘಾತದಲ್ಲಿ ಕುರಿಗಳು ಸಾವಿಗೀಡಾದರೆ ತಲಾ 5000 ರೂ. ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಗೊಳಿಸಲಾಗಿತ್ತು. ದನ ಮತ್ತು ಎಮ್ಮೆಗಳು ಸತ್ತರೆ 10,000 ರೂ. ಪರಿಹಾರ ನೀಡಲಾಗುತ್ತಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.