ಮೈಸೂರು: ಗ್ರಾಪಂ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಸದಸ್ಯರನ್ನು ಸನ್ಮಾನಿಸಲು ಹಾಗೂ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ಬೆಳಗ್ಗೆ 10.10ಕ್ಕೆ ನಂಜನಗೂಡು ತಾಲೂಕಿನ ಸುತ್ತೂರು ಸಮುಚ್ಚಯ ಕೇಂದ್ರಗಳ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಇಳಿದು, ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ 1061 ಜನ್ಮದಿನೋತ್ಸವ ಉದ್ಘಾಟಿಸುವರು.
ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಬಿಜೆಪಿ ಆಯೋಜಿಸಿರುವ ಜನಸೇವಕ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ನಂತರ 12.45 ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಓದಿ : ಸಂಪುಟ ವಿಸ್ತರಣೆ, ಉಪ ಚುನಾವಣಾ ಅಭ್ಯರ್ಥಿ ಆಯ್ಕೆ ಕುರಿತು ವರಿಷ್ಠರ ಜೊತೆ ಚರ್ಚೆ: ಸಿಎಂ