ETV Bharat / state

ಅನ್​​ಲಾಕ್ ದುರುಪಯೋಗ, ಕೊರೊನಾ ನಿರ್ಲಕ್ಷ್ಯ ಬೇಡ: ಸಿಎಂ‌ ಬಿಎಸ್​​ವೈ - Bangalore

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಇಂದಿನಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ವದಂತಿಗಳನ್ನು ನಂಬಬೇಡಿ. ಎಲ್ಲರೂ ಲಸಿಕೆ ಪಡೆಯಬೇಕು- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

CM BS Yediyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jun 21, 2021, 9:48 AM IST

ಬೆಂಗಳೂರು: ಜನ ಜೀವನಕ್ಕೆ ಅನುಕೂಲ ಕಲ್ಪಿಸಲು ಅನ್​​ಲಾಕ್ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಇದರ ದುರುಪಯೋಗ ಹಾಗು ಕೊರೊನಾ ನಿರ್ಲಕ್ಷ್ಯ ವಹಿಸದೆ ಮುನ್ನೆಚ್ಚರಿಕೆ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

  • ಪ್ರಧಾನಿ ಶ್ರೀ @narendramodi ರವರ ನೇತೃತ್ವದ ಕೇಂದ್ರ ಸರ್ಕಾರದ ತೀರ್ಮಾನದಂತೆ, ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನದ ಅಡಿಯಲ್ಲಿ, ಇಂದಿನಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.

    ಎಲ್ಲರೂ ಲಸಿಕೆ ಪಡೆದುಕೊಳ್ಳಿ, ಸುರಕ್ಷಿತವಾಗಿರಿ. ಜೊತೆಯಾಗಿ ನಾವು ಕೊರೋನಾ ಹಿಮ್ಮೆಟ್ಟಿಸೋಣ. pic.twitter.com/4UCs1QWp85

    — CM of Karnataka (@CMofKarnataka) June 21, 2021 " class="align-text-top noRightClick twitterSection" data=" ">

ಕೋವಿಡ್​​ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ ಎಂದು ಟ್ವೀಟ್ ಮೂಲಕ ಸಿಎಂ ಬಿಎಸ್​​ವೈ ಮನವಿ ಮಾಡಿದ್ದಾರೆ.

ಸಾಧ್ಯವಾದಷ್ಟು ಮನೆಯಲ್ಲೇ ಇರಿ. ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ. ಶುಚಿತ್ವ ಪಾಲಿಸಿ, ಸರದಿ ಬಂದಾಗ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ ಸರ್ಕಾರದೊಂದಿಗೆ ಸಹಕರಿಸಬೇಕು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೀರ್ಮಾನದಂತೆ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನದ ಅಡಿಯಲ್ಲಿ ಇಂದಿನಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಎಲ್ಲರೂ ಲಸಿಕೆ ಪಡೆದು ಸುರಕ್ಷಿತವಾಗಿರಿ. ಜೊತೆಯಾಗಿ ನಾವು ಕೊರೊನಾ ಹಿಮ್ಮೆಟ್ಟಿಸೋಣ ಎಂದು ಸಿಎಂ ಕರೆ ನೀಡಿದ್ದಾರೆ.

ಇದನ್ನೂ ಓದಿ: Covid-19 Vaccination: ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ 'ಉಚಿತ' ಕೋವಿಡ್​ ಲಸಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.