ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಶುಭ ಕೋರಿ ನಮನ ಸಲ್ಲಿಸಿದ್ದಾರೆ.
ಸತ್ಯ, ಅಹಿಂಸೆ ಮೂಲಕ ಸತ್ಯಾಗ್ರಹದ ದಾರಿಯಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
ಪ್ರಾಮಾಣಿಕತೆ ಮತ್ತು ದೇಶಭಕ್ತಿಯ ಸಾಕಾರ ರೂಪದಂತಿದ್ದ ಮಾಜಿ ಪ್ರಧಾನಮಂತ್ರಿ, ಭಾರತ ರತ್ನ, ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.