ಬೆಂಗಳೂರು: ಇಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿ, ಅಗತ್ಯ ಅನುದಾನದ ಕುರಿತು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ ಜನರಿಗೆ ಯಾವುದೇ ತೊಂದರೆ ಆಗದ ರೀತಿ ಅಗತ್ಯ ಸೌಕರ್ಯ ಒದಗಿಸಲು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಲ್ಲಿ ಮಳೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.