ETV Bharat / state

'ಆತ್ಮ ನಿರ್ಭರ ಭಾರತ' ದೇಶ ವಾಸಿಗರ ಆತ್ಮ ವಿಶ್ವಾಸ ಹೆಚ್ಚಿಸಿದೆ: ಸಿಎಂ ಬಿಎಸ್​ವೈ

ನೊವೆಲ್ ಕೊರನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತೀಯರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಹಲವು ನಾಯಕರು ಟ್ವೀಟ್​ ಮೂಲಕ ಸ್ವಾಗತಿಸಿದ್ದಾರೆ.

CM BSY and Team tweet about special economic package
ವಿಶೇಷ ಆರ್ಥಿಕ ಪ್ಯಾಕೇಜ್
author img

By

Published : May 12, 2020, 11:53 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ. ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.

CM BSY and Team tweet about special economic package
ಸಿಎಂ ಟ್ವೀಟ್

ಕೋವಿಡ್ 19 ಬಿಕ್ಕಟ್ಟ ಅನ್ನು ಸಮರ್ಥವಾಗಿ ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ. ಮೊತ್ತದ (ಜಿಡಿಪಿಯ ಶೇ10ರಷ್ಟು) ಅಭೂತಪೂರ್ವ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟ್ವೀಟ್​

ಎದುರಾಗಿರುವ ಸವಾಲನ್ನು ಅವಕಾಶವನ್ನಾಗಿ ಪರಿವರ್ತಿಸಿ, ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ವಸುಧೈವ ಕುಟುಂಬಕಂ ಪರಿಕಲ್ಪನೆಯ ಸದೃಢ ಸಾಮಾಜಿಕ ವ್ಯವಸ್ಥೆಯನ್ನು ಸಾಕಾರಗೊಳಿಸಲು, ಪ್ರಧಾನಿ ಮೋದಿ ಅವರು ಕರೆ ನೀಡಿರುವ ಆತ್ಮ ನಿರ್ಭರ ಭಾರತ ಅಭಿಯಾನ ಸಮಸ್ತ ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಇನ್ನೊಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್​ ಶೆಟ್ಟರ್​ ಸೇರಿದಂತೆ ಹಲವ ಬಿಜೆಪಿ ಮುಖಂಡರು ಟ್ವೀಟ್ ಮಾಡಿ ಪಿಎಂ ಮೋದಿ ಅವರ ನಿರ್ಧಾರ ಸ್ವಾಗತಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.