ETV Bharat / state

130ಕ್ಕೂ ಹೆಚ್ಚು ಸೀಟ್ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಸವಾಲು ನನ್ನ ಮುಂದಿದೆ: BSY - ರಾಜ್ಯಪಾಲ ವಜುಬಾಯಿ ವಾಲಾ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹೊಗೆಯಾಡುತ್ತಿರುವ ನಡುವೆಯೇ ಸಿಎಂ ಬಿಎಸ್​​ವೈ ವಿರೋಧಿ ಬಣಗಳಿಗೆ ಟಾಂಗ್ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸೀಟ್ ಗೆದ್ದು ಮತ್ತೆ ಅಧಿಕಾರಕ್ಕೆ ತರುತ್ತೇನೆ. 10 -12 ಜಿಲ್ಲೆ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡಲಿದ್ದೇನೆ ಎಂದಿದ್ದಾರೆ.

cm-bsy
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
author img

By

Published : Jun 30, 2021, 7:06 PM IST

Updated : Jun 30, 2021, 7:21 PM IST

ಬೆಂಗಳೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ. ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ನಂತರ ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಒಂದು ಕಣ್ಣಿನ ಲೇಸರ್ ಚಿಕಿತ್ಸೆ ನಡೆಸಲಾಗಿದೆ ಅವರ ಆರೋಗ್ಯ ವಿಚಾರಿಸಿದ್ದೇನೆ. ಸುದೀರ್ಘವಾಗಿ ಅನೇಕ ವಿಚಾರಗಳ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ರಾಜ್ಯಪಾಲರೂ ಕೂಡ ಬಹಳ ಸಮಾಧಾನದಿಂದ ಅನೇಕ ವಿಷಯಗಳನ್ನು ತಿಳಿದುಕೊಂಡಿದ್ದಾರೆ ಎಂದರು.

130ಕ್ಕೂ ಹೆಚ್ಚು ಸೀಟ್ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಸವಾಲು ನನ್ನ ಮುಂದಿದೆ: BSY

ಯಾವುದೇ ರಾಜಕೀಯ ವಿಚಾರವನ್ನು ರಾಜ್ಯಪಾಲರ ಜೊತೆ ಮಾತನಾಡುವ ಪ್ರಶ್ನೆ ಬರುವುದಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ ಅವರು ಕೂಡ ಕೆಲವು ಸಲಹೆ ಕೊಟ್ಟಿದ್ದಾರೆ ಎಂದರು.

ಒಳ್ಳೆಯ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮುಂಬರಲಿರುವ ಎರಡು ವರ್ಷದಲ್ಲಿ ಮಾಡಬೇಕಿದೆ. ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ. ಅದಕ್ಕಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎನ್ನುವ ಭರವಸೆಯನ್ನು ರಾಜ್ಯದ ಜನರಿಗೆ, ಕಾರ್ಯಕರ್ತರಿಗೆ ಕೊಡುತ್ತಿದ್ದೇನೆ ಎಂದರು.

ಜಿಲ್ಲಾ ಪ್ರವಾಸದ ಸುಳಿವು ನೀಡಿದ ಬಿಎಸ್​ವೈ

ಜಿಲ್ಲಾ ಪ್ರವಾಸ ಮಾಡಿ ಸಮಸ್ಯೆ ತಿಳಿದುಕೊಳ್ಳುವ ತೀರ್ಮಾನ ಮಾಡಿದ್ದೇನೆ. ಆ ನಿಟ್ಟಿನಲ್ಲಿ ಮುಂದಿನ ವಾರದಿಂದ ಪ್ರವಾಸ ಮಾಡುತ್ತೇನೆ. 10-12 ಜಿಲ್ಲೆಗಳಿಗೆ ಪ್ರವಾಸ ಮಾಡುತ್ತೇನೆ ಎನ್ನುವ ಮೂಲಕ ಜಿಲ್ಲಾ ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಿ ತಮ್ಮದೇ ನಾಯಕತ್ವ ಎನ್ನುವ ಸಂದೇಶವನ್ನು ವಿರೋಧಿ ಬಣಕ್ಕೆ ಸಂದೇಶ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾನು ಯಾವುದೇ ವಿಷಯಗಳ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುತ್ತಿಲ್ಲ ಎಲ್ಲವನ್ನೂ ಶಾಂತವಾಗಿ ಕೇಳುತ್ತಿದ್ದೇನೆ, ತಿಳಿದುಕೊಳ್ಳುತ್ತಿದ್ದೇನೆ ನಾನು ಯಾವುದೇ ವಿಷಯದಲ್ಲೂ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಇಷ್ಟು ಮಾತ್ರ ನಿಮಗೆ ಹೇಳುತ್ತೇನೆ ಎಂದರು.

ಸಿಡಿ ಪ್ರಕರಣದಲ್ಲಿ ಸಿಲುಕಿಸುವ ಕುರಿತು ಬಿಜೆಪಿಯವರೇ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಮಾಧ್ಯಮಗಳಲ್ಲಿ ಕೇಳಿದ್ದೇನೆ ಅಷ್ಟೇ ಎಂದು ಹೆಚ್ಚು ಮಾತನಾಡಲು ನಿರಾಕರಿಸಿದ ಸಿಎಂ ನಾಯಕತ್ವ ಬದಲಾವಣೆ ಕುರಿತು ವಿಷಯ ಪ್ರಸ್ತಾಪಿಸುತ್ತಿದ್ದಂತೆ ಕೈ ಮುಗಿದು ನಿರ್ಗಮಿಸಿದರು.

Last Updated : Jun 30, 2021, 7:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.