ETV Bharat / state

ಕ್ಯಾಬಿನೆಟ್​ನಲ್ಲಿ ಯಾರಿಗೆಲ್ಲ ಮಂತ್ರಿ ಸ್ಥಾನ...? ಇನ್ಯಾರಿಗೆ ಅರ್ಧಚಂದ್ರ? - ಬಿಜೆಪಿ ಸರ್ಕಾರ ಮಂತ್ರಿಮಂಡಳ ರಚನೆ

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರಿಗೂ ಹಾಗೂ ಸೋಲುಂಡ ಅನರ್ಹರಿಗೂ ಸಚಿವ ಸ್ಥಾನ ನೀಡುವ ಕುರಿತು ಬಿಎಸ್​ವೈ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

cm yadiyurappa
ಬಿಎಸ್​​ ಯಡಿಯೂರಪ್ಪ
author img

By

Published : Dec 27, 2019, 8:09 PM IST

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಕಾರಣರಾದ ಎಲ್ಲರಿಗೂ ಮಂತ್ರಿಗಿರಿ ದಕ್ಕಲಿದ್ದು, ಉಪಚುನಾವಣೆಯಲ್ಲಿ ಸೋಲುಂಡ ಹಿರಿಯ ನಾಯಕ ಹೆಚ್.ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ಕೂಡಾ ಮಂತ್ರಿ ಮಂಡಲಕ್ಕೆ ಸೇರುವುದು ಬಹುತೇಕ ನಿಶ್ಚಿತ ಎಂದು ಮೂಲಗಳು ಹೇಳುತ್ತಿವೆ.

ಸರ್ಕಾರ ರಚಿಸಲು ಮೂಲ ಕಾರಣರಾದವರನ್ನು ಯಾವ ಕಾರಣಕ್ಕೂ ಕೈ ಬಿಡದಿರಲು ಸಿಎಂ ಬಿ.ಎಸ್.ವೈ ನಿರ್ಧರಿಸಿದ್ದು, ಈ ಕುರಿತು ಪಕ್ಷದ ಹೈಕಮಾಂಡ್​ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಗೆದ್ದವರಿಗಷ್ಟೇ ಮಂತ್ರಿಗಿರಿ ಎಂದು, ಈ ಮೊದಲು ಹೇಳಲಾಗಿತ್ತಾದರೂ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ಹೊರಬಂದ ಎಲ್ಲರಿಗೂ ಮಂತ್ರಿಗಿರಿ ನೀಡುವುದು ಅನಿವಾರ್ಯ ಎಂದು ಯಡಿಯೂರಪ್ಪ ದೆಹಲಿಗೆ ವರಿಷ್ಠರಿಗೆ ತಿಳಿಸಿದ್ದಾರಂತೆ.

ಇದಕ್ಕೆ ಪೂರಕವಾಗಿ ಹಾಲಿ ಸಚಿವ ಸಂಪುಟದಲ್ಲಿರುವ ಆರು ಮಂದಿಯನ್ನು ಕೈಬಿಡಲು ನಿರ್ಧರಿಸಿದ್ದು, ಪಕ್ಷದ ಕೆಲಸಕ್ಕಾಗಿ ನಿಯೋಜಿಸುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನೀಡಬೇಕು. ಅದೇ ರೀತಿ ಪಕ್ಷಕ್ಕಾಗಿ ಕೆಲಸ ಮಾಡಿದ ಪ್ರಮುಖರಿಗೂ ಸಚಿವ ಸ್ಥಾನ ನೀಡಬೇಕೆಂಬುದು ಯಡಿಯೂರಪ್ಪ ಅವರ ಲೆಕ್ಕಾಚಾರ ಎನ್ನಲಾಗಿದೆ.

ಹಾಲಿ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂತ್ರಿ ಮಂಡಲದಿಂದ ಕೈ ಬಿಟ್ಟು, ವಿಧಾನ ಪರಿಷತ್ ಸಭಾಪತಿ ಸ್ಥಾನದಲ್ಲಿ ಕೂರಿಸುವ ಲೆಕ್ಕಾಚಾರವಿದೆ. ಉನ್ನತ ಮೂಲಗಳ ಪ್ರಕಾರ, ವಿಧಾನ ಪರಿಷತ್​ನಲ್ಲಿ ಜೆಡಿಎಸ್ ಸದಸ್ಯರಾಗಿರುವವರ ಪೈಕಿ ಹಲವರು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ಸಭಾಪತಿ ಹುದ್ದೆಯಲ್ಲಿ ಕೂರಿಸಲು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೀಗೆ, ಕೋಟ ಶ್ರೀನಿವಾಸ ಪೂಜಾರಿಯವರು ಸಚಿವ ಸಂಪುಟದಿಂದ ಹೊರಹೋಗುವುದರ ಜತೆಗೆ ಹಾಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯಪಾಲ ಹುದ್ದೆಯನ್ನು ನೀಡುವ ಸಲುವಾಗಿ ಯಡಿಯೂರಪ್ಪ ಅವರ ಸಂಪುಟದಿಂದ ಬಿಡುಗಡೆ ಮಾಡಲು ತೀರ್ಮಾನಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಪುಟದಿಂದ ಕೈ ಬಿಡಲು ಯಡಿಯೂರಪ್ಪ ಮುಂದಾಗಿದ್ದಾರಂತೆ. ಇದರ ಸುಳಿವು ಸಿಗುತ್ತಿದ್ದಂತೆಯೇ ಮಂತ್ರಿಗಿರಿ ಉಳಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ವರಿಷ್ಠರನ್ನು ಈಗಾಗಲೇ ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೆ ಯಡಿಯೂರಪ್ಪ ಅವರು ಮಂತ್ರಿ ಮಂಡಲದಿಂದ ಹೊರಹೋಗಬೇಕಾದವರ ಪಟ್ಟಿಯನ್ನು ದೆಹಲಿ ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

ಕನಿಷ್ಠ ಪಕ್ಷ ಆರು ಮಂದಿ ಹೊರಬಿದ್ದರೆ ಸರ್ಕಾರ ರಚಿಸಲು ಕಾರಣರಾದವರ ಜೊತೆಗೆ ಪಕ್ಷಕ್ಕಾಗಿ ದುಡಿದ ಹಲವರಿಗೆ ಅವಕಾಶ ಮಾಡಿಕೊಡಬಹುದು. ಜಿ.ಹೆಚ್.ತಿಪ್ಪಾರೆಡ್ಡಿ, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿಯವರಂತಹ ನಾಯಕರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ಮಾಡಿಕೊಡಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗಬಹುದು ಎಂದೂ ಬಿಎಸ್​ವೈ ದೆಹಲಿ ವರಿಷ್ಠರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

Intro:ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಕಾರಣರಾಗಿ ಅನರ್ಹಗೊಂಡಿದ್ದ ಎಲ್ಲರಿಗೂ ಮಂತ್ರಿಗಿರಿ ದಕ್ಕಲಿದ್ದು, ಉಪಚುನಾವಣೆಯಲ್ಲಿ ಸೋಲುಂಡ ಹಿರಿಯ ನಾಯಕ ಹೆಚ್.ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ಕೂಡಾ ಮಂತ್ರಿ ಮಂಡಲಕ್ಕೆ ಸೇರುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ. Body:ಸರ್ಕಾರ ರಚಿಸಲು ಮೂಲ ಕಾರಣರಾದವರನ್ನು ಯಾವ ಕಾರಣಕ್ಕೂ ಕೈ ಬಿಡದಿರಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದು, ಈ ಕುರಿತು ಪಕ್ಷದ ಹೈಕಮಾಂಡ್ಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಗೆದ್ದವರಿಗಷ್ಟೇ ಮಂತ್ರಿಗಿರಿ ಎಂದು ಈ ಮೊದಲು ಹೇಳಲಾಗಿತ್ತಾದರೂ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ಹೊರಬಂದ ಎಲ್ಲ ಶಾಸಕರಿಗೂ ಮಂತ್ರಿಗಿರಿ ನೀಡುವುದು ಅನಿವಾರ್ಯ ಎಂದು ಯಡಿಯೂರಪ್ಪನವರು ದೆಹಲಿಗೆ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಹಾಲಿ ಸಚಿವ ಸಂಪುಟದಲ್ಲಿರುವ ಆರು ಮಂದಿಯನ್ನು ತೆಗೆದು ಪಕ್ಷದ ಕೆಲಸಕ್ಕಾಗಿ ನಿಯೋಜಿಸುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನೀಡಬೇಕು. ಅದೇ ರೀತಿ ಪಕ್ಷಕ್ಕಾಗಿ ಕೆಲಸ ಮಾಡಿದ ಪ್ರಮುಖರಿಗೂ ಸಚಿವ ಸ್ಥಾನ ನೀಡಬೇಕೆಂಬುದು ಯಡಿಯೂರಪ್ಪ ಅವರ ಲೆಕ್ಕಾಚಾರ ಎನ್ನಲಾಗಿದೆ.
ಹಾಲಿ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂತ್ರಿ ಮಂಡಲದಿಂದ ಕೈ ಬಿಟ್ಟು ವಿಧಾನಪರಿಷತ್ ಸಭಾಪತಿ ಸ್ಥಾನದಲ್ಲಿ ಕೂರಿಸುವ ಲೆಕ್ಕಾಚಾರ ಇದೇ ನೆಲೆಯಲ್ಲಿ ಈಗಾಗಲೇ ಆರಂಭವಾಗಿದೆ.
ಉನ್ನತ ಮೂಲಗಳ ಪ್ರಕಾರ, ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯರಾಗಿರುವವರ ಪೈಕಿ ಹಲವರು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾಪತಿ ಹುದ್ದೆಯಲ್ಲಿ ಕೂರಿಸಲು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗೆ ಕೋಟ ಶ್ರೀನಿವಾಸ ಪೂಜಾರಿಯವರು ಸಚಿವ ಸಂಪುಟದಿಂದ ಹೊರಹೋಗುವುದರ ಜತೆಗೆ ಹಾಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯಪಾಲ ಹುದ್ದೆಯನ್ನು ನೀಡುವ ಸಲುವಾಗಿ ಯಡಿಯೂರಪ್ಪ ಅವರ ಸಂಪುಟದಿಂದ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಈ ಮಧ್ಯೆ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಪುಟದಿಂದ ಕೈ ಬಿಡಲು ಯಡಿಯೂರಪ್ಪ ಮುಂದಾಗಿದ್ದು, ಇದರ ಸುಳಿವು ಸಿಗುತ್ತಿದ್ದಂತೆಯೇ ಮಂತ್ರಿಗಿರಿ ಉಳಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ವರಿಷ್ಠರನ್ನು ಈಗಾಗಲೇ ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೆ ಯಡಿಯೂರಪ್ಪ ಅವರು ಮಂತ್ರಿ ಮಂಡಲದಿಂದ ಹೊರಹೋಗಬೇಕಾದವರ ಪಟ್ಟಿಯನ್ನು ದೆಹಲಿ ವರಿಷ್ಠರಿಗೆ ರವಾನಿಸಿದ್ದು, ಕನಿಷ್ಠ ಪಕ್ಷ ಆರು ಮಂದಿ ಹೊರಬಿದ್ದರೆ ಸರ್ಕಾರ ರಚಿಸಲು ಕಾರಣರಾದವರ ಜೊತೆಗೆ ಪಕ್ಷಕ್ಕಾಗಿ ದುಡಿದ ಹಲವರಿಗೆ ಅವಕಾಶ ಮಾಡಿಕೊಡಬಹುದು ಎಂದು ಹೇಳಿದ್ದಾರೆ. ಅಂಗಾರ, ಜಿ.ಹೆಚ್.ತಿಪ್ಪಾರೆಡ್ಡಿ,ಅರವಿಂದ ಲಿಂಬಾವಳಿ, ಉಮೇಶ್ ಕತ್ತಿಯವರಂತಹ ನಾಯಕರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ಮಾಡಿಕೊಡಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗಬಹುದು ಎಂದೂ ಬಿಎಸ್ ವೈ ದೆಹಲಿ ವರಿಷ್ಠರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್.ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ಅವರಿಗೆ ಅವಕಾಶ ಕಲ್ಪಿಸಿಕೊಡುವುದರ ಮೂಲಕ ತಮ್ಮನ್ನು ನಂಬಿದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಸಂದೇಶ ರವಾನೆಯಾಗಬೇಕು ಎಂಬುದೂ ಯಡಿಯೂರಪ್ಪ ಅವರ ನಿಲುವಾಗಿದೆ. ಆದರೆ, ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದು ಮಾತ್ರ ಕುತೂಹಲ ಮೂಡಿಸಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.