ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕವನ್ನು ನಿಯಂತ್ರಿಸಲು ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
![CM BSY](https://etvbharatimages.akamaized.net/etvbharat/prod-images/kn-bng-02-cm-rtpcr-recieved-photo-728080_28072020121927_2807f_1595918967_657.jpg)
ಮೈಕ್ರೋಸಾಫ್ಟ್ ಕಂಪನಿ ವತಿಯಿಂದ ಇಂದು ಮೂರು ಆರ್ಟಿಪಿಸಿಆರ್ ಪರೀಕ್ಷೆ ಯಂತ್ರಗಳನ್ನು ಸರ್ಕಾರಕ್ಕೆ ಕೊಡುಗೆಯಾಗಿ ನೀಡಲಾಯಿತು. ಈ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಖಾಸಗಿ ಕಂಪನಿಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದರು. ಈ ಸಾಂಕ್ರಾಮಿಕವನ್ನು ನಿಯಂತ್ರಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ, ಮೈಕ್ರೋಸಾಫ್ಟ್ ಕಂಪನಿ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ಸಿಬ್ಬಂದಿ ಮುಖ್ಯಸ್ಥ ಸಂದೀಪ್ ಶ್ರೀವಾತ್ಸವ್, ಹಣಕಾಸು ವಿಭಾಗದ ನಿರ್ದೇಶಕ ಅಮರೇಶ್ ರಾಮಸ್ವಾಮಿ, ಅರವಿಂದ್ ಪ್ರಕಾಶ್ ಉಪಸ್ಥಿತರಿದ್ದರು.