ETV Bharat / state

ಪ್ರಧಾನಿ ಮೋದಿ ಆಶಯದಂತೆ ಕೊರೊನಾ ವಿರುದ್ಧ ಹೋರಾಡೋಣ: ಸಿಎಂ ಬಿಎಸ್​​​ವೈ ಕರೆ - Prime Minister speech

ಇಂದಿನ ಪರಿಸ್ಥಿತಿಯನ್ನು ಮನಗಂಡು ಬಡವರಿಗೆ ಉಚಿತವಾಗಿ ಆಹಾರ ನೀಡುವ ಯೋಜನೆಯನ್ನು ಮುಂದಿನ 5 ತಿಂಗಳು ಅಂದರೆ ಜುಲೈನಿಂದ ನವೆಂಬರ್ ಅಂತ್ಯದವರೆಗೆ ಮುಂದುವರೆಸಲು ಘೋಷಿಸಿರುತ್ತಾರೆ. ಈ ಯೋಜನೆಗೆ ರೂ. 90 ಸಾವಿರ ಕೋಟಿ ವೆಚ್ಚವಾಗಲಿದ್ದು, ಕಳೆದ ಮೂರು ತಿಂಗಳಲ್ಲಿ ಭರಿಸುವ ವೆಚ್ಚ 60 ಸಾವಿರ ಸೇರಿ ಒಟ್ಟು ರೂ.1.50 ಲಕ್ಷ ಕೋಟಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ಒದಗಿಸಿರುವುದು ಅಭಿನಂದನಾರ್ಹ ಸಂಗತಿಯಾಗಿದೆ ಎಂದು ಸಿಎಂ ಬಿಎಸ್​ವೈ ಹೇಳಿದ್ದಾರೆ.

CM BSY Calls for fight against coronavirus as for PM Modi's direction
ಪ್ರಧಾನಿ ಮೋದಿ ಆಶಯದಂತೆ ಕೊರೊನಾ ವಿರುದ್ಧ ಹೋರಾಡೋಣ: ಸಿಎಂ ಬಿಎಸ್​​​ವೈ ಕರೆ
author img

By

Published : Jun 30, 2020, 6:19 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಎಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಕೊರೊನಾ ನಿಯಂತ್ರಣಕ್ಕೆ ಒಟ್ಟಾಗಿ ಹೋರಾಡೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

ಪ್ರಧಾನಮಂತ್ರಿಗಳ ಭಾಷಣದ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಇಂದು ದೇಶದ ಪ್ರಧಾನಮಂತ್ರಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಭಾರತ ಇತರೆ ದೇಶಗಳಿಗೆ ಹೋಲಿಸಿದಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಲಾಕ್​​ಡೌನ್ ಅವಧಿಯಲ್ಲಿ ರಾಷ್ಟ್ರದ ಜನತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿರುವುದು ಪ್ರಮುಖ ಕಾರಣವೆಂದು ತಿಳಿಸಿ ಅನ್​​ಲಾಕ್-1ರ ಅವಧಿಯಲ್ಲಿ ನಿಯಮಗಳ ಬಗ್ಗೆ ಹೆಚ್ಚಿನ ಗಮನ ನೀಡದಿರುವುದು ಆತಂಕದ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಂಡು ನಿಯಮಗಳನ್ನು ಪಾಲಿಸಿ ಸಂವೇದನಾಶೀಲತೆಯಿಂದ ತೀರ್ಮಾನ ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಹಮತ ವ್ಯಕ್ತಪಡಿಸಿ ಜನ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಲಾಕ್​ಡೌನ್ ಅವಧಿಯಲ್ಲಿ ಜಾರಿಗೆ ತಂದ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ವಯ ದೇಶದ 80 ಕೋಟಿ ಜನಸಂಖ್ಯೆಗೆ ಏಪ್ರಿಲ್‌ನಿಂದ ಜೂನ್​​​ವರೆಗೆ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 5 ಕೆಜಿಯಂತೆ ಅಕ್ಕಿ /ಗೋಧಿ ಹಾಗೂ ಪ್ರತಿ ಕುಟುಂಬಕ್ಕೆ 1 ಕೆಜಿ ಬೇಳೆಯನ್ನು ಉಚಿತವಾಗಿ ನೀಡಲಾಗಿತ್ತು.

ಇಂದಿನ ಪರಿಸ್ಥಿತಿಯನ್ನು ಮನಗಂಡು ಬಡವರಿಗೆ ಉಚಿತವಾಗಿ ಆಹಾರ ನೀಡುವ ಯೋಜನೆಯನ್ನು ಮುಂದಿನ 5 ತಿಂಗಳು ಅಂದರೆ ಜುಲೈನಿಂದ ನವೆಂಬರ್ ಅಂತ್ಯದವರೆಗೆ ಮುಂದುವರೆಸಲು ಘೋಷಿಸಿರುತ್ತಾರೆ. ಈ ಯೋಜನೆಗೆ ರೂ. 90 ಸಾವಿರ ಕೋಟಿ ವೆಚ್ಚವಾಗಲಿದ್ದು, ಕಳೆದ ಮೂರು ತಿಂಗಳಲ್ಲಿ ಭರಿಸುವ ವೆಚ್ಚ 60 ಸಾವಿರ ಸೇರಿ ಒಟ್ಟು ರೂ.1.50 ಲಕ್ಷ ಕೋಟಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ಒದಗಿಸಿರುವುದು ಅಭಿನಂದನಾರ್ಹ ಸಂಗತಿಯಾಗಿದೆ.

ಒಂದು ದೇಶ ಒಂದು ಪಡಿತರ ಯೋಜನೆಯನ್ನು ಜಾರಿಗೆ ತಂದಿರುವುದು ಸಂತೋಷದಾಯಕವಾಗಿದೆ ಸಂಗತಿಯಾಗಿದೆ. ಇದು ಸ್ವಾವಲಂಬಿ ಭಾರತ ನಿರ್ಮಾಣದ ಬಗ್ಗೆ ಮತ್ತೊಮ್ಮೆ ಪುನರುಚ್ಚರಿಸುತ್ತದೆ. ದೇಶದಲ್ಲಿ ಹಿಂದುಳಿದವರ, ಬಡವರ ಸಬಲೀಕರಣಕ್ಕೆ ಆರ್ಥಿಕ ಚಟುವಟಿಕೆಗಳನ್ನು ಮುಂದುವರೆಸುವ ಘೋಷಣೆ ಮಾಡಿದ್ದಾರೆ.

ಸಂಕಷ್ಟದ ಸಮಯದಲ್ಲಿ ದೇಶಕ್ಕೆ ಅನ್ನ ನೀಡುವ ರೈತರು, ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿದ ತೆರಿಗೆದಾರರನ್ನು ಅಭಿನಂದಿಸಿದ ಮಾನ್ಯ ಪ್ರಧಾನಿಗಳು, ದೇಶದ ಎಲ್ಲರೂ ಆರೋಗ್ಯವಾಗಿರಬೇಕೆಂದು ಬಯಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಿ ಹಾಗೂ ಮುಖಗವಸನ್ನು (ಮಾಸ್ಕ್) ತಪ್ಪದೇ ಬಳಸಲು ವಿನಂತಿಸಿರುತ್ತಾರೆ.

ಇದಕ್ಕಾಗಿ ನಾನು ಪ್ರಧಾನಮಂತ್ರಿಯವರನ್ನು ಅಭಿನಂದಿಸುತ್ತೇನೆ. ಹಾಗೂ ಅವರ ಕರೆಯಂತೆ ಎಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಂತರವನ್ನು ಕಾಯ್ದುಕೊಂಡು ಮಾಸ್ಕ್​​ ಬಳಸಿ ಆರೋಗ್ಯ ಕಾಪಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ತರಲು ಒಟ್ಟಾಗಿ ಹೋರಾಡೋಣ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.