ETV Bharat / state

ನೃತ್ಯ ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ - ನೃತ್ಯ ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಕೊರೊನಾ ಸೋಂಕಿನಿಂದ ನಿಧನರಾಗಿರುವ ಅಪ್ರತಿಮ ನೃತ್ಯ ಕಲಾವಿದೆ ಭಾನುಮತಿ ಅವರಿಗೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.

CM BSY Condolance
CM BSY Condolance
author img

By

Published : May 25, 2021, 12:05 AM IST

ಬೆಂಗಳೂರು: ನೃತ್ಯ ಕಲಾವಿದೆ ಬಿ. ಭಾನುಮತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಖ್ಯಾತ ನೃತ್ಯಕಲಾವಿದೆ ಬಿ.ಭಾನುಮತಿಯವರ ನಿಧನಕ್ಕೆ ಮುಖ್ಯಮಂತ್ರಿ @BSYBJPರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಶಾಸ್ತ್ರೀಯ ನೃತ್ಯವನ್ನು ದೇಶ-ವಿದೇಶಗಳಲ್ಲಿ ಪಸರಿಸಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ

    — CM of Karnataka (@CMofKarnataka) May 24, 2021 " class="align-text-top noRightClick twitterSection" data=" ">
ಕಲಾವಿದರ ಕುಟುಂಬದಿಂದ ಬಂದಿದ್ದ ಭಾನುಮತಿ ಅವರು ಶಾಸ್ತ್ರೀಯ ನೃತ್ಯದ ಸೊಬಗನ್ನು ದೇಶ-ವಿದೇಶಗಳಲ್ಲಿ ಪಸರಿಸಿದರು. ಜೊತೆಗೆ ತಮ್ಮ ನೃತ್ಯ ಕಲಾಮಂದಿರದ ಮೂಲಕ ಅತ್ಯುತ್ತಮ ಕಲಾವಿದರನ್ನು ಕೊಡುಗೆಯಾಗಿ ನೀಡಿದ್ದಾರೆಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ, ಶಿಷ್ಯವೃಂದ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಹುಟ್ಟಡಗಿಸಲು ನೀತಿ ಮರು ವಿಮರ್ಶೆ ಅಗತ್ಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ,ಕೇಂದ್ರ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಸನ್ಮಾನಗಳಿಗೆ ಭಾಜನರಾದ ಭಾನುಮತಿ ಅವರ ನಿಧನದಿಂದ ಕರ್ನಾಟಕ ಸಾಂಸ್ಕೃತಿಕ ಲೋಕ ದೊಡ್ಡ ನಷ್ಟ ಅನುಭವಿಸಿದೆ. ಇವರ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಕೂಡ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.