ETV Bharat / state

ಬೀದಿಬದಿ ವ್ಯಾಪಾರಿಗಳಿಗೆ ₹2 ಸಾವಿರ ಸಹಾಯಧನ ನೀಡಲು ಸಿಎಂ ಚಾಲನೆ.. ಸಾಲದ ಖಾತೆಗೆ ಜಮಾ ಮಾಡದಂತೆ ಸೂಚನೆ - CM BSY drives Subsidiary for street vendors in wake of covid

ಈ ಪ್ಯಾಕೇಜ್‍ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು, ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ 2ನೇ ಅಲೆ ನಮ್ಮನ್ನು ತೀವ್ರವಾಗಿ ಬಾಧಿಸಿದೆ. ಇಂತಹ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಸರ್ಕಾರ 1,700 ಕೋಟಿ ರೂ. ಗಳಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದೆ..

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಯೂರಪ್ಪ
author img

By

Published : Jun 8, 2021, 4:10 PM IST

ಬೆಂಗಳೂರು : ಸರ್ಕಾರದಿಂದ ಘೋಷಣೆ ಮಾಡಿರುವ ಪಿಎಂ ಸ್ವನಿಧಿ ಯೋಜನೆಯಡಿ ನೋಂದಾಯಿತ ಅರ್ಹ ಬಿಪಿಎಲ್ ಕುಟುಂಬಗಳಿಗೆ ಸಹಾಯ ಧನ ಪ್ರಕಟಿಸಿದ್ದು, 2.20 ಲಕ್ಷ ಕುಟುಂಬಗಳಿಗೆ ತಲಾ 2 ಸಾವಿರ ರೂಪಾಯಿ ಖಾತೆಗಳಿಗೆ ನೇರ ಜಮೆ ಮಾಡಲಾಗುತ್ತಿದೆ. ಈ ಹಣವನ್ನು ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕ್​ಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ 2 ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಸಿಎಂ, ಇದು ಕೋವಿಡ್​​ನಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ, ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳುವ ಸ್ಥಳದಲ್ಲಿ ಮೂಲಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದಿದ್ದಾರೆ.

ಆತ್ಮನಿರ್ಭರ್ ನಿಧಿ ಯೋಜನೆಯಡಿ ಸಾಲ : ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ರೂ.10,000 ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈವರೆಗೂ ಯೋಜನೆಯಡಿ ರೂ. 107.92 ಕೋಟಿಗಳಷ್ಟು ಸಾಲವನ್ನು ವಿತರಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ದಿನಾಂಕ 19.05.2021ರಂದು ಸರ್ಕಾರದಿಂದ ವಿಶೇಷ ಪ್ಯಾಕೇಜ್‍ನಡಿ ತಲಾ 2,000 ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ, 2,16,439 ಫಲಾನುಭವಿಗಳ ಪೈಕಿ ಆಧಾರ್ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ತಲಾ ರೂ. 2,000ರಂತೆ ಒಟ್ಟು ಸಹಾಯಧನ ರೂ. 38.33 ಕೋಟಿಗಳನ್ನು ವರ್ಗಾಯಿಸಲಾಗುತ್ತಿದೆ ಎಂದರು.

ಕಾರ್ಮಿಕರಿಗೆ ನೇರ ನಗದು ವರ್ಗಾವಣೆ : ಉಳಿದಂತೆ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೇ ಇರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿ, ಸಹಾಯಧನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು. ಈ ಸಹಾಯಧನ ಪಡೆದುಕೊಳ್ಳಲು ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಈ ಪ್ಯಾಕೇಜ್‍ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು, ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ 2ನೇ ಅಲೆ ನಮ್ಮನ್ನು ತೀವ್ರವಾಗಿ ಬಾಧಿಸಿದೆ.

ಇಂತಹ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಸರ್ಕಾರ 1,700 ಕೋಟಿ ರೂ. ಗಳಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದೆ. ಈಗಾಗಲೇ ವಿವಿಧ ವರ್ಗದ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮೂಲಕ ಧನ ಸಹಾಯ ಮಾಡಲಾಗಿದೆ. ಇಂದು ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಪ್ಯಾಕೇಜ್ ಘೋಷಣೆಯಾದ ಇತರ ವರ್ಗಗಳಿಗೂ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಅರ್ಜಿ ಪಡೆಯದೇ ಪರಿಹಾರ ವಿತರಣೆ : ಬೀದಿಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ಮಹಾನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು. ಬೀದಿಬದಿ ವ್ಯಾಪಾರಿಗಳು ತಮ್ಮ ಕಾರ್ಯ ನಿರ್ವಹಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಎಲ್ಲಾ ಮುನ್ನೆಚ್ಚರಿಕೆಯ ಕ್ರಮವಹಿಸಬೇಕೆಂದು ಮನವಿ ಮಾಡಿದರು.

ಸಮಾರಂಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್​ ನಾರಾಯಣ್ ಅವರು, ಬೀದಿಬದಿ ವ್ಯಾಪಾರಿಗಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. 2.14 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ನೇರವಾಗಿ ತಲಾ 2 ಸಾವಿರ ರೂ. ನೆರವನ್ನು ಅರ್ಜಿ ಪಡೆಯದೇ ವಿತರಿಸಲಾಗುತ್ತಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿಎಂ ಸ್ವನಿಧಿ ಅಡಿ ₹10 ಸಾವಿರ ಸಾಲ ಸೌಲಭ್ಯ ಹಾಗೂ 2ನೇ ಅಲೆ ಸಂದರ್ಭದಲ್ಲಿ ನೀಡಲಾಗುತ್ತಿರುವ 2 ಸಾವಿರ ರೂ. ನೆರವಿನಿಂದ ಅನುಕೂಲವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಇ-ಆಡಳಿತ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಸಿಎಂ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಎನ್. ಮಂಜುಶ್ರೀ ಮತ್ತಿತರ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.