ETV Bharat / state

ಶಿವಾಜಿನಗರ ಬಿಜೆಪಿ ಅಭ್ಯರ್ಥಿ ಪರ ಸಿಎಂ ಭರ್ಜರಿ ರೋಡ್ ಶೋ

author img

By

Published : Nov 26, 2019, 11:36 PM IST

ಹಲಸೂರು ಕೆರೆ ಬಳಿ ಇರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋಗೆ ಚಾಲನೆ ನೀಡಿದ ಸಿಎಂ ಬಿಎಸ್​ವೈ, ಸಾವಿರಾರು ಕಾರ್ಯಕರ್ತರ ಜೊತೆ ಶಿವಾಜಿ ನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು ಏಳು ಕಿಲೋಮೀಟರ್ ಅದ್ದೂರಿ ರೋಡ್ ಶೋ ನಡೆಸಿದರು.

CM BSY Election campaign in Shivajinagar
ಶಿವಾಜಿನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಸಿಎಂ ಬಿಎಸ್​ವೈ

ಬೆಂಗಳೂರು: ವಿಧಾನಸಭೆ ಉಪಚುನಾವಣೆಗೆ ಕೇಸರಿ ಪಾಳಯದ ನಾಯಕರು ಬಿರುಸಿನ ಪ್ರಚಾರ ಮಾಡುತ್ತಿದ್ದು, ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಶರವಣ ಪರ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದರು.

ಶಿವಾಜಿನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಸಿಎಂ ಬಿಎಸ್​ವೈ

ಹಲಸೂರು ಕೆರೆ ಬಳಿ ಇರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋಗೆ ಚಾಲನೆ ನೀಡಿದ ಸಿಎಂ ಬಿಎಸ್​ವೈ, ಸಾವಿರಾರು ಕಾರ್ಯಕರ್ತರ ಜೊತೆ ಶಿವಾಜಿ ನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು ಏಳು ಕಿಲೋಮೀಟರ್ ಅದ್ದೂರಿ ರೋಡ್ ಶೋ ನಡೆಸಿದರು.

ಇದೇ ಮೊದಲ ಬಾರಿಗೆ ಶಿವಾಜಿನಗರಕ್ಕೆ ಮತಯಾಚನೆಗೆ ಬಂದ ಸಿಎಂ ಯಡಿಯೂರಪ್ಪ ಅವರನ್ನು, ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ದೂರಿಯಾಗಿ ಸ್ವಾಗತಿಸಿದರು. ರಸ್ತೆಯುದ್ದಕ್ಕೂ ಹೂವು ಚೆಲ್ಲಿ, ಹೂವಿನ ಮಾಲೆ ಹಾಕುತ್ತಾ ಬಿಜೆಪಿ ಪರ ಘೋಷಣೆ ಕೂಗುತ್ತಾ ಬಿಎಸ್​ವೈಗೆ ಸಾಥ್ ನೀಡಿದರು. ಹಲಸೂರು ಕೆರೆಬಳಿಯಿಂದ ಪ್ರಾರಂಭಗೊಂಡ ರೋಡ್ ಶೋ ಭಾರತಿ ನಗರದ ಮುತ್ಯಾಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಕೊನೆಗೊಂಡಿತು.

ಈ ವೇಳೆ ಮಾತನಾಡಿದ ಸಿಎಂ, ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಅದ್ದೂರಿ ರೋಡ್ ಶೋ ನಡೆಸಿದ್ದೇವೆ. ಸಾವಿರಾರು ಜನ ನಮಗೆ ಬೆಂಬಲ ಸೂಚಿಸಿದ್ದಾರೆ. ಈ ಕ್ಷೇತ್ರದಲ್ಲಿ ತಿರುವಳ್ಳುವರ್​ ಪ್ರತಿಮೆ ಪ್ರತಿಷ್ಠಾಪನೆ ಮಾಡಿರೋದು ನಮಗೆ ದೊಡ್ಡ ಶಕ್ತಿ ಬಂದಂತಾಗಿದೆ. 15 ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ, ಶಿವಾಜಿನಗರದಲ್ಲೂ ಗೆಲ್ಲುತ್ತೇವೆ. ಶಿವಾಜಿನಗರದ ಜನ ನಮಗೆ ಆಶೀರ್ವಾದ ಮಾಡಬೇಕು. ಒಂದು ಸ್ಥಿರ ಸರ್ಕಾರ ನಡೆಸುವುದಕ್ಕೆ ನಮಗೆ ಅವಕಾಶ ಮಾಡಿಕೊಡಬೇಕು. ಕ್ಷೇತ್ರದ ಅಭಿವೃದ್ಧಿಗೆ ನನ್ನೆಲ್ಲ ಶಕ್ತಿಮೀರಿ ಶರವಣ ಜೊತೆ ಕೆಲಸ ಮಾಡುತ್ತೇನೆ ಎಂಬ ಭರವಸೆ ನೀಡುತ್ತೇನೆ ಎಂದರು.

ರೋಷನ್ ಬೇಗ್ ಶಿವಾಜಿನಗರದಲ್ಲಿ ಬಿಜೆಪಿ‌ ಅಭ್ಯರ್ಥಿ ಪರ ಪ್ರಚಾರಕ್ಕೆ ಬರ್ತಾರ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್​ವೈ , ರೋಷನ್ ಬೇಗ್ ನನ್ನ ಸಂಪರ್ಕದಲ್ಲಿ ಇಲ್ಲ. ನಾನು ರಾಜ್ಯ ಪ್ರವಾಸದಲ್ಲಿ ಬ್ಯುಸಿಯಾಗಿದ್ದೇನೆ. ಅದರೆ ಎಲ್ಲರು ಬೆಂಬಲ ಕೊಡುವಂತ ವಾತಾವರಣ ನಿರ್ಮಾಣವಾಗಿದೆ. ಖಂಡಿತವಾಗಿಯೂ ಶರವಣ ಸುಮಾರು 15 ರಿಂದ 30 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಹೇಳಿದರು

Intro:ರಾಜ್ಯ ಉಪಚುನಾವಣೆಗೆ ಕೇಸರಿ ಪಾಳಯದ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದು, ಇಂದು ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಶರವಣ ಅವರ ಪರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಶಿವಾಜಿನಗರದಲ್ಲಿ ಭರ್ಜರಿ ರೋಡ್ ಶೋ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಮತಯಾಚನೆ ಮಾಡಿದರು. ಹಲಸೂರು ಕೆರೆ ಬಳಿ ಇರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆ ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆ ಶಿವಾಜಿ ನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅದ್ದೂರಿ ರೋಡ್ ಶೋ ನಡೆಸಿ ದರು.

Body:ಇದೇ ಮೊದಲ ಬಾರಿಗೆ ಶಿವಾಜಿನಗರಕ್ಕೆ ಮತಯಾಚನೆಗೆ ಬಂದ ಸಿಎಂ ಯಡಿಯೂರಪ್ಪನವರನ್ನು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರುಗಳು ಅದ್ದೂರಿಯಾಗಿ ಸ್ವಾಗತ ಮಾಡಿದರು ರಸ್ತೆಯುದ್ದಕ್ಕೂ ಹೂವು ಚೆಲ್ಲಿ ಹೂವಿನ ಮಾಲೆ ಹಾಕುತ್ತಾ ಬಿಜೆಪಿ ಪರ ಘೋಷಣೆಗಳ ಕೂಗುತ್ತ ಬಿಜೆಪಿ ಕಾರ್ಯಕರ್ತರು ಸಿಎಮ್ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು. ಹಲಸೂರು ಕೆರೆಬಳಿ ಇಂದ ಶುರುವಾದ ರೋಡ್ ಶೋ ಭಾರತಿ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಬಂದು ದೇವಸ್ಥಾನದಲ್ಲಿ ಯಡಿಯೂರಪ್ಪ ಪೂಜೆ ಸಲ್ಲಿಸುವ ಮೂಲಕ ರೋಡ್ ಶೋ ಕೊನೆಗೊಳಿಸಿದ್ರು.

Conclusion:ನಂತರ ಈ ಟಿವಿ ಭಾರತ ಜೊತೆ ಮಾತನಾಡಿದ ಸಿಎಮ್ ಯಡಿಯೂರಪ್ಪ ,ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಇಂದು ಅದ್ದೂರಿ ರೋಡ್ ಶೋ ನಡೆಸಿದ್ದೇವೆ. ಸಾವಿರಾರು ಜನ ನಮಗೆ ಬೆಂಬಲ ಸೂಚಿಸಿದ್ದಾರೆ.ಈ ಕ್ಷೇತ್ರದಲ್ಲಿ ತಿರುವಳ್ಳರ್ ಪ್ರತಿಮೆ ಪ್ರತಿಷ್ಠಾಪನೆ ಮಾಡಿರೋದು ನಮಗೆ ದೊಡ್ಡ ಶಕ್ತಿ ಬಂದಂತಾಗಿದೆ. ೧೫ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ. ಶಿವಾಜಿನಗರದಲ್ಲೂ ಗೆಲ್ಲುತ್ತೇವೆ. ಶಿವಾಜಿನಗರದ ಜನ ನಮಗೆ ಆಶೀರ್ವಾದ ಮಾಡಬೇಕು ಒಂದು ಸ್ಥಿರ ಸರ್ಕಾರ ನಡೆಸುವುದಕ್ಕೆ ನಮಗೆ ಅವಕಾಶ ಮಾಡಿಕೊಡಬೇಕು. ಶಿವಾಜಿ ನಗರದ ಅಭಿವೃದ್ಧಿಗೆ ನನ್ನೆಲ್ಲ ಶಕ್ತಿಮೀರಿ ಶರವಣ ಜೊತೆ ಕೆಲಸ ಮಾಡುತ್ತೇನೆ ಎಂಬ ಭರವಸೆ ನೀಡುತ್ತೇನೆ ಎಂದ ಸಿ ಎಮ್ ಯಡಿಯೂರಪ್ಪ ರೋಷನ್ ಬೇಗ್ ಶಿವಾಜಿನಗರದಲ್ಲಿ ಬಿಜೆಪಿ‌ ಅಭ್ಯರ್ಥಿ ಪರ ಪ್ರಚಾರಕ್ಕೆ ಬರ್ತಾರ ಎಂಬ ಪ್ರಶ್ನೆಗೆ ಶಾಂತವಾಗೇ ಉತ್ತರಿಸಿ ,ರೋಷನ್ ಬೇಗ್ ನನ್ನ ಸಂಪರ್ಕದಲ್ಲಿ ಇಲ್ಲ.ನಾನು ರಾಜ್ಯ ಪ್ರವಾಸದಲ್ಲಿ ಬ್ಯುಸಿಯಾಗಿದ್ದೇನೆ.ಅದರೆ ಎಲ್ಲರು ಬೆಂಬಲ ಕೊಡುವಂತ ವಾತಾವರಣ ನಿರ್ಮಾಣವಾಗಿದೆ ಖಂಡಿತವಾಗಿಯೂ ಶರವಣ ಸುಮಾರು ೨೫ ರಿಂದ ೩೦ ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈಟಿವಿ ಭಾರತಗೆ ತಿಳಿಸಿದರು.

ಸತೀಶ ಎಂಬಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.