ಬೆಂಗಳೂರು: ನಗರ ಜಿಲ್ಲಾ ಖನಿಜ ಪ್ರತಿಷ್ಠಾನಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಹಕಾರ ಸಚಿವ ಎಸ್. ಟಿ.ಸೋಮಶೇಖರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ನಗರ ಜಿಲ್ಲಾ ಖನಿಜ ಪ್ರತಿಷ್ಠಾನಕ್ಕೆ ಸಂಬಂಧಿಸಿದಂತೆ ಕಲ್ಲು ಕ್ವಾರಿ ಹಂಚಿಕೆ, ಎಂ ಸ್ಯಾಂಡ್ ಮರಳು ಪೂರೈಕೆ ಬೇಡಿಕೆ, ಪೂರೈಕೆ, ಹೊಸ ಪರವಾನಗಿ ಅಗತ್ಯತೆ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.