ETV Bharat / state

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ: ಇಡೀ ದಿನ ಪೂರ್ವಭಾವಿ ಸಭೆ ನಡೆಸಿದ ಸಿಎಂ - ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬಿಎಸ್​ವೈ

ಬಜೆಟ್​ ಮಂಡನೆಯ ಸಿದ್ಧತೆಯಲ್ಲಿರುವ ಸಿಎಂ ಬಿಎಸ್​ವೈ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು.

CM BSY held a pre-budget meeting
ಬಜೆಟ್​ ಪೂರ್ವಭಾವಿ ಸಭೆ ನಡೆಸಿದ ಸಿಎಂ
author img

By

Published : Feb 18, 2021, 6:57 PM IST

ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, 9 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ 2021-2022ರ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬೆಳಗ್ಗೆ ವಸತಿ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಯೋಜನೆ, ಕಾರ್ಯಕ್ರಮ ಅನುಷ್ಠಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗಳ ಸಭೆ ನಡೆಸಿದರು. ಸಂಜೆ ಪಶುಸಂಗೋಪನೆ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಓದಿ : ವಿಸ್ಟ್ರಾನ್‌ ಕಂಪನಿ ಉತ್ಪಾದನೆ ಪುನಾರಂಭ ಶೀಘ್ರ: ಸಚಿವ ಶೆಟ್ಟರ್‌

ಆಯಾ ಸಚಿವರು ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ತಮ್ಮ ತಮ್ಮ ಇಲಾಖೆಗಳ ಪ್ರಗತಿ ವರದಿ ನೀಡಿ, ಈ ಬಾರಿಯ ಬಜೆಟ್​​​ನಲ್ಲಿ ಬೇಡಿಕೆಗಳ ಪ್ರಸ್ತಾವನೆಗಳ ಕುರಿತು ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.