ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಉಡುಪಿ ಪ್ರವಾಸದಿಂದ ಬೆಂಗಳೂರಿಗೆ ಮರಳಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ, ಡಿಜಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆ ನಂತರ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಅಧಿಕಾರಿಗಳ ಜೊತೆಯಲ್ಲಿಯೇ ಅವರು ಆಗಮಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಚಿವ ಆರ್.ಅಶೋಕ್ ಕೂಡ ಸಭೆಗೆ ಬಂದಿದ್ದಾರೆ. ಕೆ.ಜಿ.ಹಳ್ಳಿ ಗಲಭೆ ಸಂಬಂಧ ಸಮಗ್ರವಾದ ಮಾಹಿತಿಯನ್ನು ಈ ವೇಳೆ ಸಿಎಂಗೆ ನೀಡಲಾಗುತ್ತಿದೆ.
ಪ್ರಕರಣದ ಉನ್ನತ ಮಟ್ಟದ ತನಿಖೆ, ತನಿಖೆಯ ಸ್ವರೂಪ ಸೇರಿದಂತೆ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಯುತ್ತಿದೆ.