ETV Bharat / state

ಗೃಹ ಕಚೇರಿ ಸೀಲ್​​​ಡೌನ್ ಆದ್ರೂ ಧೃತಿಗೆಡದೆ ಸರಣಿ ಸಭೆ: ಸಿಎಂ ಸಭೆಯ ಪಕ್ಷಿನೋಟ

ಕೊರೊನಾ ನಿಯಂತ್ರಣಕ್ಕೆ ಹರಸಾಹಸ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ವತಃ ತಮ್ಮ‌ ಗೃಹ ಕಚೇರಿ ಸೀಲ್‌ಡೌನ್ ಆದರೂ ಧೃತಿಗೆಡದೆ ಸರಣಿ ಸಭೆ ನಡೆಸುತ್ತಿದ್ದಾರೆ.

cm BSY meeting details
ಸಿಎಂ ಬಿಎಸ್​​ವೈ ಸಭೆಯ ಪಕ್ಷಿನೋಟ
author img

By

Published : Jun 30, 2020, 3:16 PM IST

ಬೆಂಗಳೂರು: ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ವತಃ ತಮ್ಮ‌ ಗೃಹ ಕಚೇರಿ ಸೀಲ್‌ಡೌನ್ ಆದರೂ ಧೃತಿಗೆಡದೆ ಸರಣಿ ಸಭೆ ನಡೆಸುತ್ತಿದ್ದಾರೆ. ಕಳೆದೊಂದು ವಾರದಲ್ಲಿ ಕೋವಿಡ್ ಸಂಬಂಧ ಸಿಎಂ ಏನೆಲ್ಲಾ ಸಭೆ ಮಾಡಿದರು ಎನ್ನುವ ಪಕ್ಷಿನೋಟ ಇಲ್ಲಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಬ್ಬರು ಪೊಲೀಸರು ಸೇರಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೃಷ್ಣಾದಲ್ಲಿ ತಾತ್ಕಾಲಿಕವಾಗಿ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ವಿಧಾನಸೌಧಕ್ಕೆ ಎಲ್ಲಾ ಸಭೆಗಳನ್ನು ಸ್ಥಳಾಂತರ ಮಾಡಲಾಗಿದೆ. ವಿಧಾನಸೌಧ, ವಿಕಾಸ ಸೌಧದಲ್ಲಿಯೂ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಆದರೂ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ನಿಯಂತ್ರಣ ಕುರಿತು ಸತತವಾಗಿ ಸಭೆಗಳನ್ನು ನಡೆಸಿಕೊಂಡು ಬಂದಿದ್ದಾರೆ‌.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳ ಸಭೆ, ಸಮಿತಿ ಕೊಠಡಿಯಲ್ಲಿ ಕೋವಿಡ್ ಮೀಟಿಂಗ್, ಉನ್ನತ ಮಟ್ಟದ ಸಭೆ, ಬೆಂಗಳೂರು ಶಾಸಕರು, ಸಚಿವರು, ಸಂಸದರ ಸಭೆ, ಸಚಿವ ಸಂಪುಟ ಸಭೆ, ತಜ್ಞರ ಸಭೆ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಒಂದು ವಾರ ಬಹುತೇಕ ಸಮಯವನ್ನು ಕೊರೊನಾ ನಿಯಂತ್ರಣ ಸಂಬಂಧಿತ ಚಟುವಟಿಕೆಗಳಿಗೆ ಮೀಸಲಿರಿಸಿದ್ದರು. ಜೊತೆ ಇತರೆ ನಿಯೋಗಗಳ ಭೇಟಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಯನ್ನು ನೀಡಿದ್ದಾರೆ.

ಸಿಎಂ ಬಿಎಸ್​​ವೈ ಸಭೆಯ ಪಕ್ಷಿನೋಟ

ಒಂದು ವಾರದ ಸಿಎಂ ಚಟುವಟಿಕೆ ಪಕ್ಷಿನೋಟ:

ಜೂನ್ -22: ಸಿಐಐ ವತಿಯಿಂದ ಆಯೋಜಿಸಿದ್ದ 12ನೇ ಹೋರಾಸಿಸ್ ಇಂಡಿಯಾ ಸಭೆಯಲ್ಲಿ ಕೋವಿಡ್ ನಂತರ ಆರ್ಥಿಕ ಅಭಿವೃದ್ಧಿ ಕುರಿತು ಮಾತನಾಡಿದರು.

ಬೆಂಗಳೂರು ಮಹಾನಗರದಲ್ಲಿ‌ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು‌ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜೂನ್ - 23: ಕೋಲಾರ ಜಿಲ್ಲೆಯ ಶಾಸಕರ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿತು. ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ.ಮಾಧುಸ್ವಾಮಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಅಬಕಾರಿ ಸಚಿವ ಕೆ. ನಾಗೇಶ್, ಸಂಸದ ಮುನಿಸ್ವಾಮಿ, ವಿಧಾನಸಭೆಯ ಮಾಜಿ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಕುಮಾರ್ ಹಾಗೂ ಕೋಲಾರ ಜಿಲ್ಲೆಯ ಶಾಸಕರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂನ್ - 25 : ವಿಧಾನಸೌಧದಲ್ಲಿ ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು.

ಬೆಂಗಳೂರು ಮಹಾನಗರದಲ್ಲಿ ಕೋವಿಡ್ 19 ಸೊಂಕು ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಸಭೆ‌ ನಡೆಸಿದರು.

ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಉಪಮುಖ್ಯ ಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಹಾಗೂ ಗೋವಿಂದ ಕಾರಜೋಳ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಭೈರತಿ ಬಸವರಾಜ, ಸಂಸದ ತೇಜಸ್ವಿ ಸೂರ್ಯ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂನ್ - 26: ನಿಮಾನ್ಸ್​​ ಆಸ್ಪತ್ರೆಯಲ್ಲಿನ ಉತ್ತರ ಕ್ಯಾಂಪಸ್​​​ನಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಹೊರ ರೋಗಿಗಳು ವಿಭಾಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆನ್‌ಲೈನ್ ಮೂಲಕ ಉದ್ಘಾಟಿಸಿದರು. ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ನಿಮಾನ್ಸ್​ ನಿರ್ದೇಶಕ ಬಿ.ಎನ್. ಗಂಗಾಧರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಸಚಿವರು, ಶಾಸಕರಗಳು ಹಾಗೂ ಸಂಸತ್ ಸದಸ್ಯರುಗಳ ಸಭೆ ನಡೆಸಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಮುಂದಿನ ಕಾರ್ಯತಂತ್ರಗಳ ಕುರಿತು ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಯಡಿಯೂರಪ್ಪ ತಜ್ಞರೊಂದಿಗೆ ಸಮಾಲೋಚನಾ ಸಭೆ ನಡೆಸಿ, ಸಲಹೆಗಳನ್ನು ಪಡೆದುಕೊಂಡರು. ತಜ್ಞ ವೈದ್ಯರುಗಳಾದ ಡಾ. ದೇವಿಶೆಟ್ಟಿ, ಡಾ. ಮಂಜುನಾಥ್, ಡಾ. ಗಿರೀಶ್, ಡಾ. ಸುದರ್ಶನ್, ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.

ಜೂನ್ - 27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ‌ ಬಳಿ 511ನೇ ಕೆಂಪೇಗೌಡ ಜಯಂತಿ ಪ್ರಯುಕ್ತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು GAME ರಾಷ್ಟ್ರೀಯ ಟಾಸ್ಕ್ ಫೋರ್ಸ್ ಆಯೋಜಿಸಿದ್ದ ಆರ್ಥಿಕತೆ ಸುಧಾರಿಸುವ ಸಂಬಂಧ ಎಂ.ಎಸ್.ಎಂ.ಇ. ಬೆಳವಣಿಗೆ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರ್ಚುಯಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ವಿಚಾರವಾಗಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು‌‌ ನಡೆಸಲಾಯಿತು. ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾದ ವಿಶ್ವನಾಥ್, ಮುಖ್ಯ ಕಾರ್ಯದರ್ಶಿಗಳಾದ ವಿಜಯ್ ಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.

ಜೂನ್ - 29: ಮುಖ್ಯಮಂತ್ರಿ ‌ಬಿ.ಎಸ್. ‌ಯಡಿಯೂರಪ್ಪ‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆ.ಎಸ್.ಎಸ್. ಆಸ್ಪತ್ರೆ ಮೈಸೂರು, ಇಲ್ಲಿ ನೂತನವಾಗಿ ಪ್ರಾರಂಭಿಸಲಿರುವ ಕೋವಿಡ್-19 ಲ್ಯಾಬೊರೇಟರಿ (ಆನ್‍ಲೈನ್ ವಿಡಿಯೋ ಮುಖಾಂತರ) ಉದ್ಘಾಟನಾ‌ ಕಾರ್ಯಕ್ರಮವನ್ನು ‌ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿವಂಗತ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ ಉದ್ಯೋಗಾಂಕ್ಷಿಗಳಿಗಾಗಿ ಅಭಿವೃದ್ಧಿ ಪಡಿಸಿರುವ “ಸ್ಕಿಲ್ ಕನೆಕ್ಟ್” ಪೋರ್ಟಲ್‍ಗೆ ಚಾಲನೆ ನೀಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೋವಿಡ್ -19 ವಿಷಯಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕರು ಮತ್ತು ವೈದ್ಯಾಧಿಕಾರಿಗಳ ಸಭೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.