ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ಪ್ರವಾಹ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸುವಂತೆ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಭೂ ಕುಸಿತ ಸೂಚನೆ ಇರುವ ಕಡೆ ಜನರನ್ನು ಸ್ಥಳಾಂತರಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಗಳಲ್ಲಿನ ಸ್ಥಿತಿಗತಿ, ಪರಿಹಾರ ಕಾರ್ಯಾರಚನೆ, ಹಣಕಾಸು ಲಭ್ಯತೆ, ಉಪಕರಣ ವ್ಯವಸ್ಥೆಗಳ ಅವಲೋಕನ ನಡೆಸಿದರು. ನಂತರ ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕಳೆದ 8 ದಿನಗಳಿಂದ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು.
ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುತ್ತದೆ, ಸದ್ಯಕ್ಕೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡುವಂತೆ ಸೂಚನೆ ನೀಡಿದರು.
ನದಿ ಪ್ರವಾಹ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಬೇಕು. ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತಗಳಿಗೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ವಿಧಾನಸೌಧ ಕಾರಿಡಾರ್ಗಳಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಸಿಎಂ ಸೂಚನೆ