ETV Bharat / state

ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸರಣಿ ಸಭೆ

ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಣಿ ಸಭೆ ನಡೆಸಲಿದ್ದಾರೆ.

ಸಿಎಂ ಸರಣಿ ಸಭೆ
author img

By

Published : Aug 1, 2019, 12:13 PM IST

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೆ ಬಿ.ಎಸ್.ಯಡಿಯೂರಪ್ಪ ನಿರಂತರವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದು, ಇಂದೂ ಕೂಡ ವಿಧಾನಸೌಧದಲ್ಲಿ ಸರಣಿ ಸಭೆ ನಡೆಸಲಿದ್ದಾರೆ.

ಮೊದಲು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ. ಸಾಲಮನ್ನಾಕ್ಕಾಗಿ ಎಷ್ಟು ಹಣ ಮೀಸಲಿಡಲಾಗಿದೆ. ಸಾಲ ಮನ್ನಾಗೆ ಎಷ್ಟು ಹಣ ಖರ್ಚಾಗಿದೆ. ಇನ್ನೂ ಎಷ್ಟು ಹಣ ಬೇಕಾಗಬಹುದು ಎಂದು ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ, ಸರ್ಕಾರದ ಯೋಜನೆಗಳ ಮೀಸಲಿಟ್ಟ ಹಣ, ಯಾವ ಯಾವ ಕಾರ್ಯಕ್ರಮ ಗಳಿಗೆ ಎಷ್ಟೆಷ್ಟು ಹಣ ಮೀಸಲಿರಿಸಲಾಗಿದೆ. ಯಾವ ಕಾರ್ಯಕ್ರಮಗಳಿಗೆ ಇನ್ನೂ ಹಣ ಬಿಡುಗಡೆ ಆಗಬೇಕಿದೆ ಎಂಬ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

ನಂತರ ಬೆಳೆ ಸಮೀಕ್ಷೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿನ ಬರ, ಬಿತ್ತನೆ ಸೇರಿದಂತೆ ಇತರ ವಿಷಯಗಳ ಕುರಿತು ಸಮಗ್ರ ಮಾಹಿತಿ ಪಡೆಯಲಿದ್ದಾರೆ. ಇದರೊಂದಿಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ ಸರ್ಕಾರಿ ಆದೇಶ ಹೊರಡಿಸಿರುವ ಋಣಮುಕ್ತ ಕಾಯ್ದೆ ಜಾರಿಯ ಸಾಧಕ - ಬಾಧಕಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಸರ್ವರಿಗೂ ಸೂರು ಕಲ್ಪಿಸುವ ಗುರಿ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ವಸತಿ ಯೋಜನೆಗಳು, ಅವುಗಳ ಅನುಷ್ಠಾನ ಸೇರಿದಂತೆ ವಸತಿ ಇಲಾಖೆಯ ಸಮಗ್ರ ಚಿತ್ರಣದ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇನ್ನು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೌಜನ್ಯದ ಭೇಟಿ ನೀಡಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಿದ್ದಾರೆ.

Intro:

ಬೆಂಗಳೂರು: ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿರಂತರವಾಗಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇಂದೂ ಕೂಡ ವಿಧಾನಸೌಧದಲ್ಲಿ ಸರಣಿ ಸಭೆ ನಡೆಸಲಿದ್ದಾರೆ.

ಮೊದಲು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಬಿಎಸ್ವೈ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ. ಸಾಲ ಮನ್ನಾಕ್ಕಾಗಿ ಎಷ್ಟು ಹಣ ಮೀಸಲಿಡಲಾಗಿದೆ,ಸಾಲ ಮನ್ನಾಗೆ ಎಷ್ಟು ಹಣ ಖರ್ಚಾಗಿದೆ ಇನ್ನೂ ಎಷ್ಟು ಹಣ ಸಾಲ ಮನ್ನಾಗೆ ಬೇಕಾಗಬಹುದು ಎಂದು ಚರ್ಚೆ ಇಂದಿನ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ ಸರ್ಕಾರದ ಯೋಜನೆಗಳ ಮೀಸಲಿಟ್ಟ ಹಣದ ಬಗ್ಗೆ ಚರ್ಚೆ ಯಾವ ಯಾವ ಕಾರ್ಯಕ್ರಮ ಗಳಿಗೆ ಎಷ್ಟೆಷ್ಟು ಹಣ ಮೀಸಲು ಕೆಲ ಕಾರ್ಯಕ್ರಮಗಳಿಗೆ ಇನ್ನೂ ಹಣ ಬಿಡುಗಡೆ ಆಗಬೇಕಿದೆ ಎಂಬ ಸಿಎಂ ಚರ್ಚೆ ನಡೆಸಲಿದ್ದಾರೆ.

ನಂತರ ಬೆಳೆ ಸಮೀಕ್ಷೆ ಕುರಿತು ಸಂವಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ, ರಾಜ್ಯದಲ್ಲಿನ ಬರ,ಭಿತ್ತನೆ ಇತ್ಯಾದಿ ಸೇರಿದಂತೆ ಸಮಗ್ರ ಮಾಹಿತಿ ಪಡೆಯಲಿದ್ದಾರೆ.

ಇದರೊಂದಿಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ ಸರ್ಕಾರಿ ಆದೇಶ ಹೊರಡಿಸಿರುವ ಋಣಮುಕ್ತ ಕಾಯ್ದೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಕಾಯ್ದೆ ಜಾರಿ ಸಾಧಕ-ಬಾಧಕ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಸರ್ವರಿಗೂ ಸೂರು ಕಲ್ಪಿಸುವ ಗುರಿ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ವಸತಿ ಯೋಜನೆಗಳು,ಅವುಗಳ ಅನುಷ್ಠಾನ ಸೇರಿದಂತೆ ವಸತಿ ಇಲಾಖೆಯ ಸಮಗ್ರ ಚಿತ್ರಣದ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಇನ್ನು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ
ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ಸೌಜನ್ಯದ ಭೇಟಿ ನೀಡಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಿದ್ದಾರೆ.
Body:-ಪ್ರಶಾಂತ್ ಕುಮಾರ್Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.