ETV Bharat / state

ಡಾ. ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆಯಲ್ಲಿ ಸಿಎಂ ಭಾಗಿ: ಸಾರ್ವಜನಿಕರಿಗೆ ಅನ್ನದಾಸೋಹ - ಬೆಂಗಳೂರು ಲೇಟೆಸ್ಟ್ ನ್ಯೂಸ್

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಿ, ಪುಷ್ಪನಮನ ಸಲ್ಲಿಸಿದರು. ಜೊತೆಗೆ ಅನ್ನ ದಾಸೋಹದಲ್ಲಿ ಭಾಗಿಯಾಗಿ ಊಟ ಹಂಚಿದರು.

CM BSY participated in Shivakumar Swamiji's 2nd death anniversary
ಡಾ. ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆಯಲ್ಲಿ ಸಿಎಂ ಭಾಗಿ; ಸಾರ್ವಜನಿಕರಿಗೆ ಅನ್ನದಾಸೋಹ
author img

By

Published : Jan 21, 2021, 12:30 PM IST

ಬೆಂಗಳೂರು: ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ನಗರದ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಡಾ. ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ

ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಿ, ಪುಷ್ಪನಮನ ಸಲ್ಲಿಸಿದರು. ಜೊತೆಗೆ ಅನ್ನ ದಾಸೋಹದಲ್ಲಿ ಭಾಗಿಯಾಗಿ ಊಟ ವಿತರಿಸಿದರು. ಸಚಿವ ಬಿ.ಸಿ. ಪಾಟೀಲ್, ಮಾಜಿ ಸಭಾಪತಿ, ಕಾಂಗ್ರೆಸ್ ಮುಖಂಡ ಎಸ್.ಆರ್. ಪಾಟೀಲ್, ಕೇಂದ್ರ ಸಚಿವ ಸಾರಂಗಿ ಕೂಡಾ ಭಾಗಿಯಾಗಿದ್ದರು.

ಈ ಸುದ್ದಿಯನ್ನೂ ಓದಿ: ಸಿದ್ದಗಂಗಾ ಶ್ರೀ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವಾಗಿ ಘೋಷಿಸಿ: ಸಿಎಂಗೆ ವೀರಶೈವ ಮಹಾಸಭಾ ಮನವಿ

ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ ಮನೋಹರ್ ಅಬ್ಬಿಗೆರೆ ಮಾತನಾಡಿ, ಸ್ವಾಮೀಜಿಯವರ ದ್ವಿತೀಯ ಪುಣ್ಯ ಸ್ಮರಣೆ ಕಾರ್ಯಕ್ರಮದ ಹಿನ್ನೆಲೆ ಹತ್ತು ಸಾವಿರ ಜನರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತೀ ವರ್ಷ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.