ETV Bharat / state

ಲಸಿಕಾ ಕಾರ್ಯತಂತ್ರ ರೂಪಿಸಲು ತಜ್ಞೆ ಗಗನ್ ದೀಪ್ ಕಾಂಗ್ ನೇತೃತ್ವದ ಸಮಿತಿ ರಚನೆ: ಸಿಎಂ ಬಿಎಸ್​ವೈ ಘೋಷಣೆ - ಗಗನ್ ದೀಪ್ ಕಾಂಗ್ ನೇ

ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರ್ ಮೂಲಕ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಸಿಲಿಂಡರ್ ಹೆಚ್ಚಾಗಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿಎಂ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸಿಎಂ ಬಿಎಸ್​ವೈ
ಸಿಎಂ ಬಿಎಸ್​ವೈ
author img

By

Published : May 13, 2021, 5:56 PM IST

Updated : May 13, 2021, 7:14 PM IST

ಬೆಂಗಳೂರು: ರಾಜ್ಯದಲ್ಲಿ ಲಸಿಕಾ ಕಾರ್ಯತಂತ್ರ ರೂಪಿಸಲು ಖ್ಯಾತ ತಜ್ಞೆ ಗಗನ್ ದೀಪ್ ಕಾಂಗ್​​​ ನೇತೃತ್ವದಲ್ಲಿ ಸಲಹಾ ಸಮಿತಿಯನ್ನು ರಚಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ನಾಲ್ವರು ಸಚಿವರು ಜತೆಗೂಡಿ ಜಂಟಿ ಸುದ್ದಿಗೋಷ್ಟಿ ಉದ್ದೇಶಿಸಿ‌ ಮಾತನಾಡಿದ ಅವರು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ. ಗಗನ್‍ದೀಪ್ ಕಾಂಗ್ ಅವರನ್ನು ರಾಜ್ಯದ ವ್ಯಾಕ್ಸಿನೇಷನ್ ಕಾರ್ಯತಂತ್ರದ ಸಲಹೆಗಾರರಾಗಿ ರಾಜ್ಯ ಸರ್ಕಾರವು ನೇಮಕ ಮಾಡುತ್ತಿದೆ.

ಬೆಂಗಳೂರಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ

ಇವರು ವ್ಯಾಕ್ಸಿನ್‍ಗಳ ಸಂಶೋಧನೆ ಮತ್ತು ಅವುಗಳ ಬಳಕೆ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯು ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ರಾಜ್ಯದಲ್ಲಿ ಲಸಿಕಾ ಕಾರ್ಯತಂತ್ರ ರೂಪಿಸಲು ಸಲಹೆ ನೀಡಲಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿ 3ನೇ ಅಲೆ ಎದುರಿಸಲು ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಈ ಸಂಬಂಧ ಈಗಲೇ ಎಲ್ಲಾ ತಯಾರಿಗಳನ್ನು ಮಾಡಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ.‌ ರಾಜ್ಯದ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50,112 ಪ್ರಕರಣಗಳು ವರದಿಯಾಗಿದ್ದು, ಈ ಕಠಿಣ ಕ್ರಮಗಳಿಂದಾಗಿ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ನಿನ್ನೆ 39,900ಕ್ಕೆ ಇಳಿದಿದೆ ಎಂಬುದು ಸಮಾಧಾನಕರ ಸಂಗತಿ. ಇದು ನಿರ್ಬಂಧಗಳ ಜಾರಿ ನಂತರ ಪರಿಸ್ಥಿತಿ ಸುಧಾರಿಸುತ್ತಿರುವುದಕ್ಕೆ ನಿದರ್ಶನವಾಗಿದೆ. ಬೆಂಗಳೂರಿನಲ್ಲಿ ಮೇ 5 ರಂದು 23,106 ಪ್ರಕರಣಗಳಿದ್ದಿದ್ದು, ನಿನ್ನೆಗೆ 16,286 ಸಂಖ್ಯೆಗೆ ಇಳಿಕೆಯಾಗಿದೆ. ಪ್ರಾರಂಭದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಏರುಗತಿಯಲ್ಲಿದ್ದ ಬೆಂಗಳೂರು, ಬೀದರ್ ಮತ್ತು ಕಲಬುರಗಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ ಎಂದರು.

ಹಾಸಿಗೆಗಳ ಹೆಚ್ಚಳ

ಕಳೆದ ವರ್ಷ ಮಾರ್ಚ್‌ನಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 1,970 ಆಕ್ಸಿಜನೇಟೆಡ್ ಬೆಡ್‍ಗಳು, 444 ಐಸಿಯುಗಳು ಹಾಗೂ 610 ವೆಂಟಿಲೇಟರ್ ಸಹಿತ ಐಸಿಯುಗಳ ಸೌಲಭ್ಯವಿತ್ತು. ಈ ಎಲ್ಲ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದರು.

ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್ ಬೆಡ್‍ಗಳು, 1,145 ಐಸಿಯು ಬೆಡ್‍ಗಳು, 2,059 ವೆಂಟಿಲೇಟರ್ ಬೆಡ್‍ಗಳು ಹಾಗೂ 1,248 ಹೆಚ್‍ಎಫ್‍ಎನ್‍ಸಿ ಸೌಲಭ್ಯಗಳು ಲಭ್ಯವಿದೆ. ಅಂತೆಯೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್ ಬೆಡ್‍ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4,700 ರಿಂದ 9,405ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್ ಬೆಡ್‍ಗಳ ಸಂಖ್ಯೆಯನ್ನು 341 ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‍ಎಫ್‍ಎನ್‍ಸಿಗಳ ಸಂಖ್ಯೆಯನ್ನು 15 ರಿಂದ 570ಕ್ಕೆ ಹೆಚ್ಚಿಸಲಾಗಿದೆ ಎಂದರು.

ಆಮ್ಲಜನಕ ಪೂರೈಕೆಗೆ ಕ್ರಮ

ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರ ರೂಪಿಸಿದೆ. ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರ್​​​​ಗಳ ಹಾಗೂ ಸಿಲಿಂಡರ್​​​ಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಬಹರೇನ್ ನಿಂದ 40 ಟನ್ ಹಾಗೂ ಕುವೈತ್​ ನಿಂದ 100 ಟನ್ ಆಮ್ಲಜನಕ ಪಡೆಯಲಾಗಿದೆ. ಜಮ್‍ಶೆಡ್‍ಪುರದಿಂದ ಟ್ರೇನ್ ಮೂಲಕ 120 ಟನ್ ಆಮ್ಲಜನಕ ತರಲಾಗಿದೆ. ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 127 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಲಸಿಕಾ ಕಾರ್ಯಚರಣೆಗೆ ಯಾವುದೇ ಆತಂಕ ಇಲ್ಲ

ಭಾರತ ಸರ್ಕಾರ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಲಸಿಕೆ ಪೂರೈಕೆ ಮಾಡುತ್ತಿದೆ. ಈ ವರೆಗೆ 1.10 ಕೋಟಿ ಡೋಸ್‍ಗಳನ್ನು ಭಾರತ ಸರ್ಕಾರ ಒದಗಿಸಿದ್ದು, ಅದರಲ್ಲಿ 99.5 ಲಕ್ಷ ಕೋವಿಶೀಲ್ಡ್ ಹಾಗೂ 10.9 ಲಕ್ಷ ಕೋವ್ಯಾಕ್ಸಿನ್ ಲಸಿಕೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು 3 ಕೋಟಿ ಡೋಸ್ ಲಸಿಕೆಗಳ ಖರೀದಿಗೆ ಆದೇಶ ನೀಡಿದೆ. ಅದರಲ್ಲಿ 2 ಕೋಟಿ ಡೋಸ್ ಕೋವಿಶೀಲ್ಡ್ ಹಾಗೂ 1 ಕೋಟಿ ಡೋಸ್ ಕೊವ್ಯಾಕ್ಸಿನ್ ಸೇರಿದೆ. ಅಲ್ಲದೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಇಂಜೆಕ್ಷನ್ ಸರಬರಾಜು ಮಾಡಲು ಜಾಗತಿಕ ಟೆಂಡರ್​​ ಕರೆಯಲಾಗಿದೆ ಎಂದು ವಿವರಿಸಿದರು.

ಮೊದಲ ಡೋಸ್ ಪಡೆದವರು ಸಂಪೂರ್ಣ ಸುರಕ್ಷತೆ ಹೊಂದಲು ಎರಡನೇ ಡೋಸ್ ಲಸಿಕೆ ನೀಡುವುದು ಅತಿ ಅಗತ್ಯ. ಆದ್ದರಿಂದ ಲಭ್ಯವಿರುವ ಲಸಿಕೆಯ ದಾಸ್ತಾನನ್ನು ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿರುವವರಿಗೆ ನೀಡಲು ನಿರ್ಧರಿಸಿದ್ದೇವೆ. ಈ ಕಾರಣಕ್ಕಾಗಿ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ನಾವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ ಎಂದರು.

ವಿಶೇಷ ಪ್ಯಾಕೇಜ್ ಬಗ್ಗೆ ಮೌನ

ಬಡ ಹಾಗೂ ಕಾರ್ಮಿಕ ವರ್ಗದವರಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಮೌನ ವಹಿಸಿದರು. ಸುದ್ದಿಗೋಷ್ಠಿ ವೇಳೆ ಕೋವಿಡ್ ನಿರ್ವಹಣೆ ಸಂಬಂಧ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾತ್ರ ಸಿಎಂ ವಿವರಿಸಿದರು. ಕೋವಿಡ್ ನಿರ್ವಹಣೆಯಲ್ಲಿನ ಅವ್ಯವಸ್ಥೆ, ವಿಶೇಷ ಪ್ಯಾಕೇಜ್ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.

ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ಸಾಕಷ್ಟು ಸಮಸ್ಯೆಯಾಗಿದೆ. ಅವರಿಗಾಗಿ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತ ಆಹಾರ ನೀಡುತ್ತಿದ್ದೇವೆ ಎಂದರು. ಮುಂದಿನ ದಿನಗಳಲ್ಲಿ ಸಂಕಷ್ಟದಲ್ಲಿರುವ ವರ್ಗದವರಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂಬ ಬಗ್ಗೆ ಯೋಚಿಸುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

Last Updated : May 13, 2021, 7:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.