ETV Bharat / state

ಬಿಜೆಪಿ ಜೊತೆ ಜೆಡಿಎಸ್ ವಿಲೀನ ಸತ್ಯಕ್ಕೆ ದೂರ : ಸಿಎಂ‌ ಬಿಎಸ್​ವೈ ಸ್ಪಷ್ಟನೆ

author img

By

Published : Dec 20, 2020, 4:32 PM IST

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ..

CM BSY
ಸಿಎಂ‌ ಬಿಎಸ್​ವೈ

ಬೆಂಗಳೂರು : ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್‌ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಸತ್ಯಕ್ಕೆ ದೂರವಾದವು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ನಿಜ. ಆದರೆ, ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಓದಿ: ನಾಳೆಯಿಂದ ಖಾಸಗಿ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆ ಬಂದ್: ಆನ್​ಲೈನ್​ ಕ್ಲಾಸ್​ ಇಲ್ಲ

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿ ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.