ETV Bharat / state

ವಿಷ್ಣು ಸ್ಮಾರಕ ಕಾಮಗಾರಿ ಶೀಘ್ರದಲ್ಲಿಯೇ ಪೂರ್ಣವಾಗಲಿದೆ: ಸಿಎಂ ಬಿಎಸ್​ವೈ ಭರವಸೆ - Anirudh

ವಿಷ್ಣು ಅಭಿಮಾನಿಗಳ ದಶಕಗಳ ಕನಸಾಗಿರುವ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಮರುಜೀವ ಬಂದಿದ್ದು, ಇತ್ತೀಚೆಗಷ್ಟೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಅವರ ಸ್ಮಾರಕ ಕಾರ್ಯ ಆದಷ್ಟು ಶೀಘ್ರವಾಗಿ ನಿರ್ಮಾಣಗೊಳ್ಳುವ ಭರವಸೆ ನೀಡಿದ್ದಾರೆ.

cm-bsy-talks-on-dr-vishnuvardhan-monument
ವಿಷ್ಣು ಸ್ಮಾರಕ ಕಾಮಗಾರಿ ಶೀಘ್ರದಲ್ಲಿಯೇ ಪೂರ್ಣವಾಗಲಿದೆ: ಸಿಎಂ ಬಿಎಸ್​ವೈ ಭರವಸೆ
author img

By

Published : Sep 15, 2020, 12:13 PM IST

ಬೆಂಗಳೂರು: ಡಾ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ. ಆದಷ್ಟು ಶೀಘ್ರ ಸ್ಮಾರಕದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದ್ದಾರೆ.

ದಿ. ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಿಂದ ಆನ್​​ಲೈನ್ ಮೂಲಕ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ, ಡಾ. ವಿಷ್ಣುವರ್ಧನ್​ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದರು ಎಂದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್​​ವೈ ಸುದ್ದಿಗೋಷ್ಠಿ

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ವಿಷ್ಣುವರ್ಧನ್ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ಮೈಸೂರು ತಾಲೂಕಿನ ಹೆಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಸ್ಮಾರಕ ನಿರ್ಮಾಣಕ್ಕೆ ಆಯವ್ಯಯದಲ್ಲಿ 11 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು 5 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ. ವಿಷ್ಣುವರ್ಧನ್ ಅವರ ಕೀರ್ತಿ ಜನಮಾನಸದಲ್ಲಿ ಎಂದೆಂದಿಗೂ ಅಜರಾಮರವಾಗಿರಲಿ. ಇವರ ನಟನಾ ಕೌಶಲ್ಯ, ಇವರ ಸಾಧನೆಯ ಹಾದಿ ಮುಂದಿನ ಪೀಳಿಗೆಗೆ ಮಾದರಿಯಾಗಲಿ. ಶೀಘ್ರ ಸ್ಮಾರಕದ ನಿರ್ಮಾಣ ಪೂರ್ಣಗೊಳ್ಳಲಿ ಎಂದು ಆಶಿಸಿದರು.

ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ” ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿ ಗೆದ್ದಿದ್ದರು. ಕನ್ನಡ ಚಿತ್ರರಂಗಕ್ಕೆ ಡಾ. ರಾಜ್‍ಕುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ಡಾ. ವಿಷ್ಣುವರ್ಧನ್ ಅವರು ಸಹ ಸೇರಿದ್ದಾರೆ ಎಂದರು.

ವಿಷ್ಣುವರ್ಧನ್ ಅವರ ಪತ್ನಿ ಪದ್ಮಶ್ರಿ ಪುರಸ್ಕೃತ ಡಾ. ಭಾರತಿ ವಿಷ್ಣುವರ್ಧನ್ ಅವರು ಪಂಚಭಾಷಾ ತಾರೆಯಾಗಿ, ಅತ್ಯುತ್ತಮ ಕಲಾವಿದೆಯಾಗಿ ನಮ್ಮ ನಡುವೆ ಇರುವುದು ಸಂತೋಷದ ಸಂಗತಿ. ವಿಷ್ಣುವರ್ಧನ್​​ ಭಾರತಿ ದಂಪತಿಯ ಅಳಿಯ ಅನಿರುದ್ಧ್ ಅವರು ಉತ್ತಮ ಕಲಾವಿದರು ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ ಎಂದು ಇಡೀ ಕುಟುಂಬದ ಕಲಾ ಸೇವೆಯನ್ನು ಸಿಎಂ ಸ್ಮರಿಸಿದರು.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.