ETV Bharat / state

ನಾಡಪ್ರಭು ಕೆಂಪೇಗೌಡರ ಜಯಂತಿ: ಮುಖ್ಯಮಂತ್ರಿಗಳಿಂದ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಜರುಗಲಿದೆ. ಸಿಎಂ ಯಡಿಯೂರಪ್ಪ, ಪ್ರಮುಖ ಸ್ವಾಮೀಜಿಗಳು ಸೇರಿದಂತೆ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಈ ವೇಳೆ ನಾಡುಪ್ರಭುವಿನ ವಿಶೇಷ ಅಂಚೆ ಚೀಟಿ ಬಿಡುಗಡೆ ಆಗಲಿದೆ.

Kempegowda Birth Anniversary
ನಾಡಪ್ರಭು ಕೆಂಪೇಗೌಡರ ಜಯಂತಿ
author img

By

Published : Jun 27, 2021, 7:50 AM IST

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಆಚರಣೆಯ ಸವಿ ನೆನಪಿಗೆ ಮುಖ್ಯಮಂತ್ರಿ ಬಿ.ಎಸ್​. ಯುಡಿಯೂರಪ್ಪ ಅವರು ಕೆಂಪೇಗೌಡರ ಅಂಚೆ ಚೀಟಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್​​ನಲ್ಲಿ 45 ಕೋಟಿ ರೂಪಾಯಿ ವೆಚ್ಚದ ಕೆಂಪೇಗೌಡರ ಅಧ್ಯಯನ ಕೇಂದ್ರದ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಬೆಳಗ್ಗೆ 11 ಗಂಟೆಗೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳ ಜೊತೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿರುವ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ, ಮುಖ್ಯಮಂತ್ರಿಗಳು ಅಂಚೆ ಚೀಟಿ ಬಿಡುಗಡೆ ಮಾಡಿದ ನಂತರ ವರ್ಚುವಲ್ ಮೂಲಕ ಜ್ಞಾನ ಭಾರತಿಯಲ್ಲಿನ ಅಧ್ಯಯನ ಕೇಂದ್ರದ ಕಾಮಗಾರಿಗೂ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

45 ಕೋಟಿ ರೂ. ವೆಚ್ಚ: ಬಿಬಿಎಂಪಿ ಸಹಯೋಗದೊಂದಿಗೆ ಜ್ಞಾನಭಾರತಿ ಕ್ಯಾಂಪಸ್​ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡ ಅಧ್ಯಯನ ಕೇಂದ್ರ ತಲೆ ಎತ್ತಲಿದೆ. ಕೆಂಪೇಗೌಡರ ಚರಿತ್ರೆ, ಬೆಂಗಳೂರು ಹಾಗೂ ರಾಜ್ಯದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಕೇಂದ್ರವಾಗಿ ಇದು ಹೊರ ಹೊಮ್ಮಲಿದೆ. ಅಲ್ಲದೆ, ನಗರಾಭಿವೃದ್ಧಿ ಬಗ್ಗೆ ನಾಡಪ್ರಭುಗಳು ಹೊಂದಿದ್ದ ಪರಿಕಲ್ಪನೆಗಳು, ಅವರು ಹೊಂದಿದ್ದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಇಲ್ಲಿ ಸಮಗ್ರ ಮಾಹಿತಿ ಸಿಗುತ್ತದೆ ಎಂದು ಡಿಸಿಎಂ ಹೇಳಿದರು.

ಕಳೆದ ವರ್ಷ ನಾಡಪ್ರಭುಗಳ 511ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು.

ಓದಿ : ವಿಧಾನಸೌಧ ಬಳಿ ತಲೆ ಎತ್ತಲಿದೆ ಬಸವಣ್ಣನ ಪುತ್ಥಳಿ: ಕಡತ ಸಿದ್ಧಪಡಿಸಲು ಸಿಎಂ ಸೂಚನೆ

ಈಗಾಗಲೇ ನೋಯ್ಡಾದಲ್ಲಿ ಪ್ರತಿಮೆ ಸಿದ್ಧವಾಗುತ್ತಿದೆ. ಇಡೀ ಯೋಜನೆಯ ಕಾರ್ಯ ಪ್ರಗತಿಯಲ್ಲಿದೆ. ಕೋವಿಡ್ ಸೋಂಕು ಇಲ್ಲವಾಗಿದ್ದರೆ, ಈ ವರ್ಷವೇ ಲೋಕಾರ್ಪಣೆ ಮಾಡುವ ಉದ್ದೇಶವಿತ್ತು. ಫೆಬ್ರುವರಿ ವೇಳೆಗೆ ಲೋಕಾರ್ಪಣೆ ಆಗಲಿದೆ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿದರು.

ಕೆಂಪೇಗೌಡರ ಸಮಾಧಿಗೆ ಡಿಸಿಎಂ ಪೂಜೆ : ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಕೆಂಪೇಗೌಡರ ಜಯಂತಿ ಪ್ರಯುಕ್ತ ಮಾಗಡಿ ತಾಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭುಗಳ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ 8.30 ಗಂಟೆ ಅವರು ಅಲ್ಲಿಗೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಕೆಂಪಾಪುರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳು, ಕಾರ್ಯಗತವಾಗುತ್ತಿರುವ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ನಂತರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.