ETV Bharat / state

ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಟಿ: ಲಸಿಕೆ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಬಿಎಸ್​ವೈ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಉಸ್ತುವಾರಿ ಸಚಿವರ ಜೊತೆಯಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ವೇಳೆ ಸಿಎಂ, ಲಸಿಕೆ ಕೊರತೆ ಬಗ್ಗೆ ಇರುವ ಎಲ್ಲ ಗೊಂದಲ ಕುರಿತು ಸ್ಪಷ್ಟೀಕರಣ ನೀಡಲಿದ್ದಾರೆ.

ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ
author img

By

Published : May 13, 2021, 11:19 AM IST

ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಗೊಂದಲ ನಿವಾರಣೆ ಕುರಿತಂತೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಕೋವಿಡ್ ಉಸ್ತುವಾರಿ ಸಚಿವರ ಜೊತೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಲಸಿಕೆ ಕೊರತೆ ಬಗ್ಗೆ ಇರುವ ಎಲ್ಲ ಗೊಂದಲಗಳ ಕುರಿತು ಸ್ಪಷ್ಟನೆ ನೀಡಲಿದ್ದಾರೆ.

ಈಗಾಗಲೇ ಆರೋಗ್ಯ ಇಲಾಖೆ ಮುಂದಿನ ಆದೇಶದವರೆಗೆ 18-44ರ ವಯೋಮಾನದವರಿಗೆ ಲಸಿಕೆ ನೀಡಿಕೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಆದರೂ 45 ವರ್ಷ ಮೇಲಿನವರಿಗೆ ಲಸಿಕೆ ಸಿಗುತ್ತಿಲ್ಲ. ಮೊದಲನೇ ಡೋಸ್ ಪಡೆದವರು ಎರಡನೇ ಡೋಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಬಹುತೇಕ ಕಡೆ ಲಸಿಕೆ ಖಾಲಿ ಎನ್ನುವ ನಾಮಫಲಕ ಕಂಡುಬರುತ್ತಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸುವ ಕುರಿತು ಸಿಎಂ ಅಧಿಕೃತ ಘೋಷಣೆ ಮಾಡಲಿದ್ದು, ಮುಂದಿನ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಲಾಕ್​ಡೌನ್ ನಂತರವೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಇನ್ನಷ್ಟು ಬಿಗಿ ಕ್ರಮದ ಘೋಷಣೆ ಸಾಧ್ಯತೆ ಇದೆ. ಇದರ ಜೊತೆಯಲ್ಲಿ ಶ್ರಮಿಕ ವರ್ಗದ ನೆರವಿಗೆ ಏನಾದರೂ ಯೋಜನೆಗಳನ್ನು ಪ್ರಕಟಿಸಬಹುದು.

ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಸ್ಫೋಟಕ್ಕೆ ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳೇ ಕಾರಣ: WHO

ETV Bharat Logo

Copyright © 2025 Ushodaya Enterprises Pvt. Ltd., All Rights Reserved.