ಬೆಂಗಳೂರು : ಕೊರೊನಾ ಸೋಂಕು ತಗುಲಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ನಡೆಯುತ್ತಿರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತ ಚಲಾಯಿಸುವಂತೆ ಜನರಿಗೆ ಕರೆ ನೀಡಿದ್ದಾರೆ.
"ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ" ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಓದಿ : ಮನೆ ಮಹಡಿಯಿಂದ ಮತದಾನ ಪ್ರಕ್ರಿಯೆ ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್
ನಿನ್ನೆ ಕೊರೊನಾ ದೃಢಪಟ್ಟ ಹಿನ್ನೆಲೆ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿರುವ ಸಿಎಂ, ಉಪಸಮರ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದ್ದರು. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಬಳಿಕ ನಿನ್ನೆ ಬೆಂಗಳೂರಿನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿತ್ತು.