ETV Bharat / state

coronavirus: ವಿವಿಧ ಜಿಲ್ಲೆಗಳ ಜನ ಪ್ರತಿನಿಧಿಗಳೊಂದಿಗೆ ಸಿಎಂ ಇಂದು ವಿಡಿಯೋ ಸಂವಾದ - ಬಿಎಸ್​ವೈ ವಿಡಿಯೋ ಸಂವಾದ

ವಿವಿಧ ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಿಎಸ್​ವೈ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ.

CM BSY
CM BSY
author img

By

Published : May 29, 2021, 12:27 AM IST

ಬೆಂಗಳೂರು: ಮಹಾಮಾರಿ ಕೋವಿಡ್-19 ಹತೋಟಿ ಹಾಗೂ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವಿವಿಧ ಜಿಲ್ಲೆಯ ಜನ ಪ್ರತಿನಿಧಿಗಳ ಜೊತೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಸಂಸತ್ ಸದಸ್ಯರು (ಲೋಕಸಭೆ ಮತ್ತು ರಾಜ್ಯಸಭೆ) ಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

CM BSY
ಮುಖ್ಯಮಂತ್ರಿ ವಿಡಿಯೋ ಸಂವಾದ

ಇದನ್ನೂ ಓದಿ: ಒದ್ದು ಹೊರ ಹಾಕಿದ್ದ ಹೆಣ್ಮಕ್ಕಳಿಂದಲೇ ತಂದೆ, ತಾತನ ಅಂತ್ಯಕ್ರಿಯೆ!

ಆಯಾ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ, ಹಳ್ಳಿಗಳಲ್ಲಿ ಸೋಂಕು ತಡೆಗೆ ವಹಿಸಿರುವ ಮುನ್ನೆಚ್ಚರಿಕೆ, ಲಾಕ್​ಡೌನ್​ಗೆ ಜನರ ಸಹಕಾರ, ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸಮಸ್ಯೆ, ಔಷಧ ಕೊರತೆ, ಐಸಿಯು, ವೆಂಟಿಲೇಟರ್ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.