ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಭೇಟಿ ನೀಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಎನ್.ಆರ್ ಸಂತೋಷ್ ನಿವಾಸಕ್ಕೆ ಭೇಟಿ ನೀಡಿದ ಅವರು ಆರೋಗ್ಯ ವಿಚಾರಿಸಿದರು. ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ ಬಳಿಕ ತೆರಳಿದರು.
ಇದನ್ನು ಓದಿ: ಸಂತೋಷ್ ವಿರುದ್ಧ ಎಫ್ಐಆರ್: ಸಿಎಂಗೆ ಶುರುವಾಗುತ್ತಾ ಪೀಕಲಾಟ ..?
ಈ ಹಿಂದೆ ಸಿಎಂ ಯಡಿಯೂರಪ್ಪ ಅವರು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಿಎಂ ಮತ್ತೆ ಡಾಲರ್ಸ್ ಕಾಲೊನಿಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.