ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಬಿಡುವಿಲ್ಲದ ಸರಣಿ ಸಭೆ ನಡುವೆ ರಾಜಭವನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದರು.
ಆರ್.ಆರ್.ನಗರ ಸಭೆ ಮುಗಿಯುತ್ತಿದ್ದಂತೆ ಗೃಹ ಕಚೇರಿ ಕೃಷ್ಣಾದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ನಂತರ ಕೆಲಕಾಲ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಕೊರೊನಾ ಸಮಸ್ಯೆ ಉದ್ಭವವಾದ ನಂತರ ಸಿಎಂ ಇದೇ ಮೊದಲ ಬಾರಿಗೆ ರಾಜಭವನಕ್ಕೆ ಭೇಟಿ ನೀಡಿದರು. ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ ಕುರಿತಂತೆ ಕೆಲಕಾಲ ಮಾತುಕತೆ ನಡೆಸಿದರು. ವಿಶೇಷವಾಗಿ ಬೆಂಗಳೂರಿನ ಸ್ಥಿತಿ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಒಂದು ವರ್ಷದ ಕೆಳಗೆ ಇದೇ ದಿನ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಅದೇ ದಿನ ಸಿಎಂ ರಾಜಭವನಕ್ಕೆ ಭೇಟಿ ನೀಡಿದ್ದು ಕಾಕತಾಳೀಯವಾಗಿದೆ.