ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಹಂಚಿಕೆ ಕುರಿತು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.
ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ ಕುರಿತು ಸಿದ್ದತೆ ನಡೆಯುತ್ತಿದ್ದು, ಈ ಸಂಬಂಧ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ವಿಡಿಯೋ ಸಂವಾದದ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಕೊವ್ಯಾಕ್ಸಿನ್ ಲಸಿಕೆ ಹಂಚಿಕೆ ಕುರಿತು ಸಭೆ ನಡೆಸಲಿದ್ದು, ರಾಜ್ಯಗಳ ಬೇಡಿಕೆ, ಪೂರೈಕೆ, ಲಸಿಕೆ ಕೊಡಲು ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.