ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ ನಡೆಯಲಿರುವ ಬೆಂಗಳೂರಿನ ಸಚಿವರು, ಶಾಸಕರು ಮತ್ತು ಸಂಸದರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವರ್ಚುವಲ್ ಮೂಲಕ ಭಾಗಿಯಾಗಲಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ರಾಜ್ಯ ವಿಪತ್ತು ನಿರ್ವಹಣೆಯ ಉಪಾಧ್ಯಕ್ಷ ಮತ್ತು ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರು, ಸಂಸದರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಗರದಲ್ಲಿ ಕೊರೊನಾ ನಿಯಂತ್ರಿಸುವ ಕುರಿತು ಶಾಸಕರು, ಸಂಸದರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಮತ್ತಷ್ಟು ಕಠಿಣ ನಿಯಮ ಜಾರಿ ಕುರಿತು ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ.
ಓದಿ : ಬೆಂಗಳೂರಿನ 118 ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಲು ಚಿಂತನೆ
ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಶಾಸಕರು, ಸಂಸದರ ಸಲಹೆಗಳ ಕುರಿತು ತಮ್ಮ ನಿರ್ಧಾರವನ್ನೂ ಪ್ರಕಟಿಸಲಿದ್ದು, ಅದರಂತೆ ಕಠಿಣ ನಿಯಮ ಕುರಿತು ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ.