ಬೆಂಗಳೂರು: ದೀಪಾವಳಿ ಹಬ್ಬದ ಶುಭಾಶಯ ಕೋರಿರುವಸಿಎಂ ಯಡಿಯೂರಪ್ಪ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಕರೆ ನೀಡಿದ್ದಾರೆ.
ಈ ಸಂಬಂಧ ತಮ್ಮ ಟ್ವಿಟರ್ ಖಾತೆ ಮೂಲಕ ವಿಡಿಯೋ ಸಂದೇಶವನ್ನು ನೀಡಿರುವ ಸಿಎಂ ಯಡಿಯೂರಪ್ಪ ರಾಜ್ಯದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಮಣ್ಣಿನ ಹಣತೆಯಲ್ಲೇ ದೀಪ ಬೆಳಗಿಸಿ ಪರಿಸರ ಸ್ನೇಹಿಯಾಗಿ ದೀಪಾವಳಿ ಹಬ್ಬ ಆಚರಿಸುವಂತೆ ಮನವಿ ಮಾಡಿದ್ದಾರೆ.
ಪಟಾಕಿ ಸಿಡಿಸುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಜತೆಗೆ ಕಸದ ಸಮಸ್ಯೆಯೂ ಉಲ್ಬಣಿಸುತ್ತದೆ. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.
125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಇರುವ ಪಟಾಕಿ ಬಳಕೆ ನಿಷೇಧಿಸಲಾಗಿದೆ. ಶೈಕ್ಷಣಿಕ ಸಂಸ್ಥೆ, ಆಸ್ಪತ್ರೆ, ವೃದ್ಧಾಶ್ರಮಗಳ ಬಳಿ ಪಟಾಕಿ ಸಿಡಿಸುವಂತಿಲ್ಲ. ರಾತ್ರಿ 10 ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪರಿಸರಕ್ಕೆ ಧಕ್ಕೆ ಆಗದಂತೆ ದೀಪಾವಳಿ ಆಚರಿಸುವಂತೆ ಮನವಿ ಮಾಡಿದ್ದಾರೆ.